ತುಮಕೂರು :
ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಆರೋಗ್ಯದಲ್ಲಿ ಮತ್ತೆ ಏರಿಳಿತವಾಗಿದ್ದು, ಕೃತಕ ಉಸಿರಾಟ ವ್ಯವಸ್ಥೆಯಿಂದ ಉಸಿರಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.
ಶ್ರೀಗಳಿಗೆ ಕಫ ಹೆಚ್ಚಾಗಿ ಉಸಿರಾಟದಲ್ಲಿ ಸ್ವಲ್ಪ ಏರಿಳಿತವಾಗಿದ್ದು, ಶ್ರೀಗಳು ಆಕ್ಸಿಜನ್ ಮೂಲಕ ಉಸಿರಾಡುತ್ತಿದ್ದಾರೆ. ವೈದ್ಯರು ಶ್ರೀಗಳಿಗೆ ಮೂಗಿನ ಮೂಲಕ ಗ್ಲೂಕೋಸ್ ನೀಡುತ್ತಿದ್ದಾರೆ. ಸ್ವಾಮೀಜಿಗಳಿಗೆ ಹೈಯರ್ ಆಂಟಿಬಯೋಟಿಕ್ ಹಾಗೂ ಫಿಸಿಯೋತೆರಪಿ ಚಿಕಿತ್ಸೆ ನೀಡಲಾಗುತ್ತಿದೆ.
ನಿನ್ನೆ ಮಧ್ಯಾಹ್ನ ಶ್ರೀಗಳಿಗೆ ಸ್ವಲ್ಫ ಕಫ ಕಟ್ಟಿಕೊಂಡಿತ್ತು. ವೈದ್ಯರು ಚಿಕಿತ್ಸೆ ನೀಡಿ ಕ್ಲೀಯರ್ ಮಾಡಿದ್ದಾರೆ. ಆಸ್ಪತ್ರೆಗೆ ಶಿಫ್ಟ್ ಮಾಡುವ ಪ್ರಶ್ನೆಯೇ ಇಲ್ಲ, ವೈದ್ಯರ ತಂಡ ಅವರ ಅರೋಗ್ಯದ ಮೇಲೆ ನಿಗಾ ವಹಿಸಿದೆ. ಶ್ರೀಗಳು ಆರೋಗ್ಯವಾಗಿದ್ದಾರೆ ಎಂದು ಸಿದ್ದಗಂಗಾ ಕಿರಿಯ ಶ್ರೀಗಳು ಮಾಹಿತಿ ನೀಡಿದ್ದಾರೆ.
ಸದ್ಯಕ್ಕೆ ತುಮಕೂರಿನ ಖಾಸಗಿ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಅವರನ್ನು ಬೆಂಗಳೂರಿಗೆ ಕರೆತರಬೇಕೆ ಎಂಬ ಬಗ್ಗೆ ವೈದ್ಯರು ಚಿಂತನೆ ನಡೆಸುತ್ತಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ