ತುಮಕೂರು:

ಸಿದ್ಧಗಂಗಾ ಶ್ರೀಗಳ ಶ್ವಾಸಕೋಶದಲ್ಲಿ ತುಂಬಿಕೊಂಡಿದ್ದ ನೀರನ್ನು ತೆಗೆಯಲಾಗಿದ್ದು, ಶ್ರೀಗಳು ಸನ್ನೆ ಮೂಲಕ ಮಾತನಾಡುತ್ತಿದ್ದಾರೆ ಎಂದು ಶ್ರೀಗಳ ಆಪ್ತ ವೈದ್ಯ ಡಾ. ಪರಮೇಶ್ ತಿಳಿಸಿದ್ದಾರೆ.
ಇಂದು ಶ್ರೀಗಳ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಮಾತನಾಡಿದ ಅವರು, ಶ್ರೀಗಳ ಶ್ವಾಸಕೋಶದ ಎರಡೂ ಭಾಗದಲ್ಲಿ ನೀರು ತುಂಬಿಕೊಂಡಿದೆ. ಈಗಾಗಲೇ ದೇಹದಿಂದ ನೀರನ್ನು ಹೊರಕ್ಕೆ ತೆಗೆಯಲಾಗಿದೆ. ಸದ್ಯ ಶ್ರೀಗಳು ಸನ್ನೆ ಮೂಲಕವೇ ಮಾತನಾಡುತ್ತಿದ್ದು, ಕಣ್ಣು ಬಿಟ್ಟು ನೋಡುತ್ತಿದ್ದಾರೆ. ಮಲಗಿದಲ್ಲಿಯೇ ಶ್ರೀಗಳು ಅವರ ಕೈಕಾಲುಗಳ ಚಲನವಲನ ಮಾಡುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಶ್ರೀಗಳಿಗೆ ದ್ರವಾಹಾರ ಮುಂದುವರೆದಿದ್ದು, ಪೂಜೆ ಮಾಡಲು ಸಾಧ್ಯವಾಗುತ್ತಿಲ್ಲ. ಕೆಲ ಕಾಲ ಕೃತಕ ಉಸಿರಾಟದ ಸಾಧನ ತೆರವುಗೊಳಿಸಿ ಸಹಜ ಉಸಿರಾಟಕ್ಕೆ ಮಾಡಿಕೊಡಲಾಗುತ್ತಿದೆ. ಎರಡು ಗಂಟೆಗಳ ಕಾಲ ಸಹಜ ಉಸಿರಾಟದ ನಂತರ ಮತ್ತೆ ತೊಂದರೆಯಾದಾಗ ಕೃತಕ ಉಸಿರಾಟ ಸಾಧನ ಅಳವಡಿಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








