ತುಮಕೂರು:

ನಡೆದಾಡುವ ದೇವರು ಎಂದೇ ಖ್ಯಾತರಾಗಿರುವ ಸಿದ್ದಗಂಗಾ ಮಠದ ಹಿರಿಯ ಶ್ರೀಗಳಾದ ಡಾ.ಶಿವಕುಮಾರಸ್ವಾಮೀಜಿಯವರ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿರುವ ಹಿನ್ನೆಲೆಯಲ್ಲಿ ಬಿಜಿಎಸ್ ಆಸ್ಪತ್ರೆಯ ವೈದ್ಯರಾದ ಡಾ.ರವೀಂದ್ರ ಅವರು ಮಠಕ್ಕೆ ಆಗಮಿಸಿ ಶ್ರೀಗಳ ಆರೋಗ್ಯ ತಪಾಸಣೆ ಮಾಡಿದರು.
ಬೆಂಗಳೂರಿನಲ್ಲಿರುವ ಬಿಜಿಎಸ್ ಆಸ್ಪತ್ರೆಗೆ ಒಮ್ಮೆ ಕರೆದೊಯ್ದು ಒಂದು ದಿನದ ಮಟ್ಟಿಗೆ ಶ್ರೀಗಳನ್ನು ದಾಖಲು ಮಾಡುವ ಕುರಿತು ದಿನನಿತ್ಯ ಶ್ರೀಗಳ ಆರೋಗ್ಯ ನೋಡಿಕೊಳ್ಳುತ್ತಿರುವ ಡಾ.ಪರಮೇಶ್ ಹಾಗೂ ಕಿರಿಯ ಶ್ರೀಗಳಾದ ಸಿದ್ದಲಿಂಗ ಸ್ವಾಮೀಜಿಗಳೊಂದಿಗೆ ಡಾ.ರವೀಂದ್ರ ಅವರು ಚರ್ಚೆ ನಡೆಸಿದ್ದಾರೆ.
ಈ ಸಂಬಂಧ ಇಂದು ಮಧ್ಯಾಹ್ನ ಮೂರು ಗಂಟೆಗೆ ಬಿಜಿಎಸ್ ಆಸ್ಪತ್ರೆಗೆ ಶ್ರೀಗಳನ್ನು ಕರೆದೊಯ್ಯುವ ಎಲ್ಲಾ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಡಾ.ಪರಮೇಶ್ ತಿಳಿಸಿದ್ದಾರೆ.
ಚಳಿಗಾಲವಾದ್ದರಿಂದ ಶ್ರೀಗಳ ಆರೋಗ್ಯದಲ್ಲಿ ಸ್ವಲ್ಪ ಏರುಪೇರಾಗಿದೆ. ಭಕ್ತರು ಗಾಬರಿಪಡುವಂತದ್ದು ಏನೂ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








