ಚಿಕ್ಕಮಗಳೂರು :
ಶತಾಯುಷಿ ಸಿದ್ದಗಂಗಾ ಮಠದ ಹಿರಿಯ ಶ್ರೀ ಡಾ.ಶಿವಕುಮಾರ ಸ್ವಾಮೀಜಿಗಳ ಲಿಂಗೈಕ್ಯರಾಗಿದ್ದು, ಅವರ ಅಂತಿಮ ದರ್ಶನ ಪಡೆದು ಹಿಂದಿರುಗುವ ವೇಳೆ ಅಪಘಾತವಾಗಿ ಓರ್ವ ಸಾವನ್ನಪ್ಪಿರುವ ಘಟನೆ ಕಡೂರು ತಾಲೂಕಿನ ಗೆದ್ಲೆಹಳ್ಳಿ ಬಳಿ ನಡೆದಿದೆ.
ಪರಮೇಶ್ವರಪ್ಪ (40) ಮೃತ ದುರ್ದೈವಿ. ಶ್ರೀಗಳ ಅಂತಿಮ ದರ್ಶನ ಪಡೆದು ಹಿಂದಿರುಗುವ ವೇಳೆ ಬೊಲೆರೋ ಕಾರು ಮರಕ್ಕೆ ಡಿಕ್ಕಿಯಾಗಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ 6 ಜನರಿಗೆ ಗಾಯಗಳಾಗಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಸದ್ಯ ಗಾಯಾಳುಗಳನ್ನು ಕಡೂರು ಅಸ್ಪತ್ರೆಗೆ ದಾಖಲಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
![](https://prajapragathi.com/wp-content/uploads/2018/09/accident11.gif)