ಮೈಸೂರು:
ಮುಂದಿನ ಚುನುವಾಣೆಯಲ್ಲಿ ಜನರ ಆರ್ಶಿವಾದದಿಂದ ಶೇ.100 ರಷ್ಟು ಖಚಿತ ನಾವು ವಾಪಸ್ ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ
ಮೈಸೂರು ಜಿಲ್ಲೆ ಹುಣಸೂರು ತಾಲೂಕಿನ ಶಾಸಕರ ಕಚೇರಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಿದ್ದರಾಮಯ್ಯ, ಅನ್ನಭಾಗ್ಯ ಯೋಜನೆಗೆ ಕತ್ತರಿ ಹಾಕಲಾಗಿದೆ. 7 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುತ್ತಿತ್ತು. ಅದನ್ನು ಕಡಿತಗೊಳಿಸಲಾಗಿದೆ. ಮುಂದೆ ನಾವೇ ಅಧಿಕಾರಕ್ಕೆ ಬರುತ್ತೇವೆ. ಬಂದ ನಂತರ 10 ಕೆಜಿ ಅಕ್ಕಿ ಕೊಡುತ್ತೇವೆ. ಎಷ್ಟು ದುಡ್ಡು ಬೇಕಾದ್ರು ಖರ್ಚಾಗಲಿ. ಇದ್ರಲ್ಲಿ ಯಾವುದೇ ಅನುಮಾನ ಇಲ್ಲ. 100 ಪರ್ಸೆಂಟ್ ವಿ ವಿಲ್ ಕಮ್ ಬ್ಯಾಕ್..! ಎಂದು ಭರವಸೆ ನೀಡಿದ್ದಾರೆ.
ಈ ಸರ್ಕಾರ ಡಕೋಟ ಸರ್ಕಾರ. ಯಡಿಯೂರಪ್ಪ ಡ್ರೈವಿಂಗ್ ಬಾರದ ಮುಖ್ಯಮಂತ್ರಿಯಾಗಿದ್ದು, ಅವರಿಗೆ ದಕೋಟ ಬಸ್ ಕೊಡಲಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ