ಬೆಂಗಳೂರು :
ನಾಳೆ (ಆ.11) ನಡೆಯಬೇಕಿದ್ದ ‘ಸಿದ್ದರಾಮಯ್ಯ ಆಡಳಿತ ಅಂತರಂಗ ಬಹಿರಂಗ’ ಎಂಬ ಗ್ರಂಥ ಲೋಕಾರ್ಪಣಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ನಾಳೆ(ಆ.11) ಬೆಳಗ್ಗೆ 11 ಗಂಟೆಗೆ ಜನಮನ ಪ್ರಕಾಶನದ ಪರವಾಗಿ ‘ಸಿದ್ದರಾಮಯ್ಯ ಆಡಳಿತ ಅಂತರಂಗ ಬಹಿರಂಗ’ ಎಂಬ ಗ್ರಂಥವನ್ನು ಲೋಕಾರ್ಪಣೆ ಮಾಡಲು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಆದರೆ ಉತ್ತರ ಕರ್ನಾಟಕ ಹಾಗೂ ಮಲೆನಾಡ ಭಾಗಗಳಲ್ಲಿ ತೀವ್ರ ಮಳೆಯಿಂದಾಗಿ ಪ್ರವಾಹ ಸ್ಥಿತಿ ಉಂಟಾಗಿರುವುದರಿಂದ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ಆಯೋಜಕರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ