ಬೈಂದೂರು:
ಹಿಂದುತ್ವದಿಂದ ದೇಶದ ಜನರ ಹೊಟ್ಟೆ ತುಂಬುವುದಿಲ್ಲ. ಜನರನ್ನು ಪ್ರಚೋದಿಸಿ ಬಿಜೆಪಿ ದಾರಿ ತಪ್ಪಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.
ಬೈಂದೂರಲ್ಲಿ ಮಾತನಾಡಿದ ಅವರು, ಮಧು ಬಂಗಾರಪ್ಪ ಪರ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಬಿಜೆಪಿ ವಿರುದ್ಧ ತೀವ್ರ ವಾಗ್ಧಾಳಿ ನಡೆಸಿದ್ದಾರೆ.
ಬಿಎಸ್ವೈ ಎರಡೂವರೆ ದಿನ ಸಿಎಂ ಆದರು. ಇದು ಪ್ರಜಾಪ್ರಭುತ್ವ ವಿರೋಧಿ ಬೆಳವಣಿಗೆ. ಮತದಾರರಿಗೆ ಬಿಎಸ್ವೈ ಮತ್ತು ಅವರ ಪುತ್ರ ಅಪಮಾನ ಮಾಡಿದ್ದಾರೆ. ಈ ಬಾರಿ ಎಲ್ಲ ಅರಾಜಕತೆಗೆ ಜನ ಉತ್ತರ ಕೊಡುತ್ತಾರೆ. ಸಮ್ಮಿಶ್ರ ಸರ್ಕಾರದ ಅಭ್ಯರ್ಥಿ ಮಧು ಬಂಗಾರಪ್ಪ ಈ ಬಾರಿ ಗೆಲ್ಲುತ್ತಾರೆ ಎಂದು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
