ಬೆಳಗಾವಿ :
ಇಂದಿರಾ ಕ್ಯಾಂಟೀನ್ ಗೆ ಕೂಡಲೇ ಅನುದಾನ ಬಿಡುಗಡೆ ಮಾಡುವಂತೆ ಸರ್ಕಾರಕ್ಕೆ ಪತ್ರ ಬರೆಯುವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಯೋಜನೆ ಮುಂದುವರೆಸುವ ಸಂಬಂಧ ಬಿಬಿಎಂಪಿ ಆಯುಕ್ತರ ಬಳಿ ಚರ್ಚೆ ನಡೆಸಿದ್ದೇನೆ. ಇಂದಿರಾ ಕ್ಯಾಂಟೀನ್ ಯೋಜನೆ ನಿಲ್ಲಿಸಬಾರದು. ಯೋಜನೆಗೆ ಅನುದಾನ ಬಿಡುಗಡೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುತ್ತೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಇಂದಿರಾ ಕ್ಯಾಂಟೀನ್ ಮಹತ್ವದ ಯೋಜನೆಯಾಗಿದೆ. ಸಾವಿರಾರು ಜನರ ಹಸಿವು ನೀಗಿಸುವ ಕೆಲಸಕ್ಕೆ ಯಾವ ಸರ್ಕಾರ ಕೂಡ ಅಡ್ಡಿಪಡಿಸಬಾರದು ಎಂದು ಅವರು ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ