ಸಿದ್ದು ನಿವಾಸಕ್ಕೆ ಕಾಂಗ್ರೆಸ್ ದಿಗ್ಗಜರೊಂದಿಗೆ ಹೆಚ್ಡಿಕೆ ಭೇಟಿ : ರಾಜಕೀಯ ಚರ್ಚೆ

ಬೆಂಗಳೂರು:   

      ಶುಕ್ರವಾರ ಮಧ್ಯಾಹ್ನ ಕಾವೇರಿ ನಿವಾಸಕ್ಕೆ ತೆರಳಿದ ಕುಮಾರಸ್ವಾಮಿ ಮೈತ್ರಿ ಸರ್ಕಾರದಲ್ಲಿ ಉಂಟಾಗಿರುವ ಬೆಳವಣಿಗೆಗಳ ಕುರಿತು ಗಂಟೆಗಳ ಕಾಲ ಚರ್ಚೆ ನಡೆಸಿದರು.

       ಮೊದಲಿಗೆ ಸಚಿವ ಡಿ.ಕೆ ಶಿವಕುಮಾರ್​ ಅವರು ಸಭೆಗೆ ಆಗಮಿಸಿದರು. ಸರ್ಕಾರಿ ಕಾರು ಬಳಸದ ಡಿಕೆಶಿ ತಮ್ಮ ಸ್ವಂತ ಕಾರಿನಲ್ಲೇ ಸಭೆಗೆ ಆಗಮಿಸಿದರು. ಇದಾದ ನಂತರ ಉಪ ಮುಖ್ಯಮಂತ್ರಿ ಪರಮೇಶ್ವರ್​, ಕೆಪಿಸಿಸಿ ಅಧ್ಯಕ್ಷ, ಕಾರ್ಯಾಧ್ಯಕ್ಷ ದಿನೇಶ್​ ಗುಂಡೂರಾವ್​, ಈಶ್ವರ ಖಂಡ್ರೆ ಸಭೆ ಆಗಮಿಸಿದರು. ನಂತರ ಈ ಸಭೆಗೆ ಮುಖ್ಯಮಂತ್ರಿ ಎಚ್​.ಡಿ ಕುಮಾರಸ್ವಾಮಿ ಅವರೂ ಆಗಮಿಸಿದ್ದು, ರಾಜಕೀಯ ವಲಯದಲ್ಲಿ ತೀವ್ರ ಕುತೂಹಲಕ್ಕೆ ಕಾರಣವಾಯಿತು.  ಈ ವೇಳೆ ಸಿದ್ದರಾಮಯ್ಯ ಕುಮಾರಸ್ವಾಮಿಯವರಿಗೆ ಸಂಯಮದ ಪಾಠ ಹೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

      ಗುರುವಾರ ಹಾಸನದಲ್ಲಿ ಬಿಜೆಪಿ ವಿರುದ್ಧ ರಾಜಕೀಯ ದಂಗೆ ಎಬ್ಬಿಸಲು ಕರೆ ನೀಡುವುದಾಗಿ ಹೇಳಿದ್ದ ಕುಮಾರಸ್ವಾಮಿ ಮಾತಿಗೆ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

      ಒಬ್ಬ ಮುಖ್ಯಮಂತ್ರಿಯಾಗಿ ಮಾತನಾಡುವಾಗ ತುಂಬಾ ಎಚ್ಚರಿಕೆಯಿಂದ ಇರಬೇಕು, ನೀವು ಹೇಳುವ ಉದ್ದೇಶ ಒಳ್ಳೆಯದೇ ಆದರೂ ಅದಕ್ಕೆ ಸಕಾರಣವೂ ಇರಬಹುದು ಆದರೆ ಮುಖ್ಯಮಂತ್ರಿಯಾಗಿ ಮಾತನಾಡುವಾಗ, ಸಂವಿಧಾನಾತ್ಮಕ ಹಾಗೂ ಕಾನೂನು ವಿಚಾರಗಳನ್ನು ನೆನಪಿನಲ್ಲಿಟ್ಟುಕೊಂಡು ಮಾತನಾಡಬೇಕಾಗುತ್ತದೆ. ನಿಮಗೂ ಸಾಕಷ್ಟು ಅನುಭವ ಇದೆ ಎಂದರು. 

      ಇನ್ನು ತಮ್ಮ ನಿವಾಸಕ್ಕೆ ಆಗಮಿಸಿದ್ದ ನಾಯಕರಿಗೆ ಸಿದ್ದರಾಮಯ್ಯ ತಮ್ಮ ನಿವಾಸದಲ್ಲೇ ಭೋಜನದ ವ್ಯವಸ್ಥೆಯನ್ನೂ ಮಾಡಿದ್ದರು. ಎಲ್ಲ ನಾಯಕರು ಮಧ್ಯಾಹ್ನದ ಭೋಜನವನ್ನು ಸಿದ್ದರಾಮಯ್ಯ ಅವರ ನಿವಾಸದಲ್ಲೇ ಸೇವಿಸಿದರು.

            ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap