ಬೆಂಗಳೂರು:

ಕಳೆದ 20 ವರ್ಷಗಳಲ್ಲಿ ಸಿದ್ದರಾಮಯ್ಯ ಅವರೇ ದಿ ಬೆಸ್ಟ್ ಸಿಎಂ ಎಂದು ಮಾಜಿ ಸಚಿವ ಬಸವರಾಜ ರಾಯರೆಡ್ಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿಯವರು ಚಿಕ್ಕಪುಟ್ಟ ವಿಷಯಗಳಿಗೆ ಪದೇ ಪದೇ ರಾಜೀನಾಮೆ ನೀಡುತ್ತೇನೆ ಅನ್ನೋದು ಸರಿಯಲ್ಲ. ಸಿದ್ದರಾಮಯ್ಯ ಅವರನ್ನ ಹೊಗಳುವ ಕೈ ಶಾಸಕರನ್ನು ನಿಯಂತ್ರಿಸಿ ಎನ್ನುವುದು ತಪ್ಪು. ಸಿದ್ದರಾಮಯ್ಯ ಅವರನ್ನ ಹೊಗಳಿದರೆ ತಪ್ಪೇನು? ಸಮ್ಮಿಶ್ರ ಸರ್ಕಾರಕ್ಕಾಗಿ ಸಿದ್ದರಾಮಯ್ಯ ಅವರು ತ್ಯಾಗ ಮಾಡಿದ್ದಾರೆ. ಕಳೆದ 20 ವರ್ಷಗಳಲ್ಲಿ ಸಿದ್ದರಾಮಯ್ಯ ದಿ ಬೆಸ್ಟ್ ಸಿಎಂ ಎಂದು ತಿಳಿಸಿದ್ದಾರೆ.

ಸಿದ್ದರಾಮಯ್ಯ ಅವರೇ ನಮ್ಮ ಮುಖ್ಯಮಂತ್ರಿಗಳು ಎಂದು ಟೀಕೆಗಳು ವ್ಯಕ್ತವಾದ ಹಿನ್ನಲೆ ತಮ್ಮ ಹೇಳಿಕೆಯಿಂದ ಹಿಂದೆ ಸರಿದ ಶಾಸಕ ಟಿ. ಸೋಮಶೇಖರ್ ಹೇಳಿಕೆಯನ್ನು ಮಾಜಿ ಸಚಿವ ಬಸವರಾಜ ರಾಯರೆಡ್ಡಿ ಸಮರ್ಥಿಸಿಕೊಂಡ ಅವರು, ಸಿದ್ದರಾಮಯ್ಯ ಅವರೇ ಮತ್ತೆ ಸಿಎಂ ಆಗಲಿ ಅಂತ ನಾನು ಕೂಡ ಬಯಸುತ್ತೇನೆ ಎಂದಿದ್ದಾರೆ.
