ಬೆಂಗಳೂರು:

ನಾವು ಭಿಕ್ಷುಕರಲ್ಲ, ಅವರೂ ಭಿಕ್ಷುಕರಲ್ಲ ಎಂದು ಹೇಳುವ ಮೂಲಕ ಸಿಎಂ ಕುಮಾರಸ್ವಾಮಿಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.
ಇಂದು ನಗರದ ಅರಮನೆ ಮೈದಾನದಲ್ಲಿ ನಡೆಯುತ್ತಿರುವ ರಾಜ್ಯ ಯುವ ಕಾಂಗ್ರೆಸ್ ಸರ್ವ ಸದಸ್ಯರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯ ಸೀಟು ಹಂಚಿಕೆ ವಿಚಾರದಲ್ಲಿ ಸಿಎಂ ಕುಮಾರಸ್ವಾಮಿಯವರು ‘ನಾವು ಭಿಕ್ಷುಕರಲ್ಲ’ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿ ‘ನಾವು ಭಿಕ್ಷುಕರಲ್ಲ, ಅವರೂ ಭಿಕ್ಷುಕರಲ್ಲ. ಯಾರಿಗೆ ಯಾರೂ ಭಿಕ್ಷುಕರಲ್ಲ. ಇದು ಸಮ್ಮಿಶ್ರ ಸರ್ಕಾರ’ ಸರ್ಕಾರ ಸಂಪೂರ್ಣವಾಗಿ ಐದು ವರ್ಷ ಅಧಿಕಾರ ಪೂರ್ಣಗೊಳಿಸಲಿದೆ ಎಂದಿದ್ದಾರೆ.
ಲೋಕಸಭೆ ಹತ್ತು ಸ್ಥಾನ ವಿಚಾರದಲ್ಲಿ ರಾಜಿ ಮಾಡಿಕೊಳ್ಳಬಾರದು. ಹಾಲಿ ಸಂಸದರ ಕ್ಷೇತ್ರಗಳನ್ನು ಜೆಡಿಎಸ್ಗೆ ಬಿಟ್ಟುಕೊಡಲು ಸಾಧ್ಯವಿಲ್ಲ. ಈ ಬಗ್ಗೆ ನಿನ್ನೆಯ ಸಭೆಯಲ್ಲಿಯೇ ತೀರ್ಮಾನಿಸಲಾಗಿದೆ. ಸೀಟು ಹಂಚಿಕೆ ಬಗ್ಗೆ ಇನ್ನೂ ನಿರ್ಧಾರವಾಗಿಲ್ಲ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








