ಬೆಂಗಳೂರು :
ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು, ಪಕ್ಷದ ಸೋಲಿನ ಹೊಣೆ ಹೊತ್ತು ಶಾಸಕಾಂಗ ಪಕ್ಷದ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ದಿಢೀರ್ ರಾಜೀನಾಮೆ ನೀಡಿದ್ದಾರೆ.
ಉಪಚುನಾವಣೆ ಸೋಲಿನ ಬಳಿಕ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ 2 ಕ್ಷೇತ್ರಗಳಲ್ಲಿ ಮಾತ್ರವೇ ಗೆಲುವ ಸಾಧಿಸಿದೆ. ನಾನು ಪ್ರಜಾಪ್ರಭುತ್ವದಲ್ಲಿ ಬಲವಾದ ನಂಬಿಕೆ ಇಟ್ಟುಕೊಂಡಿರುವವನು. ಉಪಚುನಾವಣೆ ತೀರ್ಪನ್ನು ನಾನು ಒಪ್ಪಿಕೊಂಡಿದ್ದೇನೆ. ವಿಪಕ್ಷ ನಾಯಕನಾಗಿ ಮುಂದುವರಿಯುತ್ತಿದ್ದೇನೆ ಎಂದು ತಿಳಿಸಿ ತಮ್ಮ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಹೈಕಮಾಂಡ್ ಗೆ ರವಾನಿಸಿದ್ದಾರೆ.
ರಾಜ್ಯದ 15 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯಾನ ಸೋಲನ್ನು ಅನುಭವಿಸಿದೆ. ಹೀಗಾಗಿ ಪಕ್ಷದ ಸೋಲಿನ ಹೊಣೆ ಹೊತ್ತ ವಿರೋಧ ಪಕ್ಷದ ನಾಯಕ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ದಿಢೀರ್ ರಾಜೀನಾಮೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ