ಹುಬ್ಬಳ್ಳಿ :
ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ನಗರದ ವಿಮಾನ ನಿಲ್ದಾಣದಲ್ಲಿ ಮಾತನಾಡಿದ ಅವರು, ಸೀಟು ಹಂಚಿಕೆ ವಿಚಾರವಾಗಿ ಇಂದು ಕಾಂಗ್ರೆಸ್ -ಜೆಡಿಎಸ್ ನಾಯಕರು ಬೆಂಗಳೂರಿನಲ್ಲಿ ಸಭೆ ನಡೆಸಲಿದ್ದಾರೆ. ಈ ಸಭೆ ಎರಡು ನಾಯಕರಿಗೆ ತೃಪ್ತಿ ನೀಡಲಿದೆ ಎಂಬ ಭರವಸೆ ಇದೆ. ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗುವುದು. ಅಭ್ಯರ್ಥಿಗಳ ಆಯ್ಕೆಗೆ ಇದೊಂದೇ ಮಾನದಂಡವಾಗಲಿದೆ. ಸೀಟು ಹಂಚಿಕೆ ಕುರಿತು ಎರಡು ನಾಯಕರ ನಡುವೆ ಒಪ್ಪಂದವಾಗಲಿದೆ ಎಂಬ ಆಶಾಭಾವನೆ ಇದೆ ಎಂದಿದ್ದಾರೆ.
ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಟಿಕೆಟ್ಗಾಗಿ ಅಭ್ಯರ್ಥಿಗಳ ಪೈಪೋಟಿ ಶುರುವಾಗಿದ್ದು, ಇದರ ಜೊತೆಗೆ ಸೀಟು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್-ಜೆಡಿಎಸ್ ಮಧ್ಯೆ ಹಗ್ಗ ಜಗ್ಗಾಟ ನಡೆದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ