ಮೈಸೂರು:

ಯಾವುದೇ ಭಾಷಾ ಕಲಿಕೆಗೆ ತಮ್ಮಗಳ ವಿರೋಧವಿಲ್ಲ. ಆದರೆ ಯಾವುದೇ ಭಾಷೆ ಬಲವಂತದ ಹೇರಿಕೆಯಾಗಬಾರದು ಎಂದು ಕಾಂಗ್ರೆಸ್ ಶಾಸಕಾಂಗ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹಿಂದಿ ಒಂದೇ ರಾಷ್ಟ್ರ ಭಾಷೆ ಅಲ್ಲ. ದೇಶದಲ್ಲಿ 22 ಭಾಷೆಗಳಿಗೆ ಮಾನ್ಯತೆ ನೀಡಲಾಗಿದ್ದು, ಅದರಲ್ಲಿ ಕನ್ನಡವೂ ಒಂದು. ಹಿಂದಿ ಒಂದೇ ಸಾರ್ವಭೌಮ ಭಾಷೆ ಅಲ್ಲ. ಯಾರೂ ಯಾವ ಭಾಷೆಯನ್ನು ಬೇಕಾದರೂ ಕಲಿಯಬಹುದು. ಆದರೆ ಬಲವಂತದಿಂದ ಇಂತಹದ್ದೇ ಭಾಷೆ ಕಲಿಯಿರಿ, ಇದೇ ರಾಷ್ಟ್ರೀಯ ಭಾಷೆ ಎನ್ನುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.
ಕೇಂದ್ರ ಸರ್ಕಾರವಾಗಲೀ ರಾಜ್ಯದ ಬಿಜೆಪಿ ನಾಯಕರಾಗಲೀ ಸಂತ್ರಸ್ತರಿಗೆ ಭಿಕ್ಷೆ ನೀಡುತ್ತಿಲ್ಲ. ಆದಷ್ಟು ಬೇಗ ಸಮರ್ಪಕ ನೆರೆ ಪರಿಹಾರ ನೀಡಿ, ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಪ್ರಶ್ನೆಯೊಂದಕ್ಕೆ ಸಿದ್ದರಾಮಯ್ಯ ಉತ್ತರಿಸಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








