ಬೆಂಗಳೂರು:
‘ಬೇರೆ ಸರ್ಕಾರ ಉರುಳಿಸುವುದು ದೇವೇಗೌಡರಿಗೆ ಹುಟ್ಟುಗುಣ’ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.
ಕಾವೇರಿ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಬೇರೆ ಸರ್ಕಾರ ಉರುಳಿಸುವುದು ದೇವೇಗೌಡರಿಗೆ ಹುಟ್ಟುಗುಣ. ಧರ್ಮಸಿಂಗ್ ಸರ್ಕಾರ, ಬೊಮ್ಮಾಯಿ ಸರ್ಕಾರ ಕೆಡವಿದ್ದು ಯಾರು..? ಇಂದು ಬಿಜೆಪಿ ಅಧಿಕಾರಕ್ಕೆ ಬರಲು ದೇವೇಗೌಡರು ಮತ್ತು ಕುಮಾರಸ್ವಾಮಿ ಕಾರಣ ಎಂದು ಸಿದ್ದರಾಮಯ್ಯ ಹೇಳಿಕೆ ನೀಡದ್ದಾರೆ.
ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಟಿವಿ ಚಾನೆಲ್ ಗಳಿಗೆ ಸಂದರ್ಶನ ನೀಡಿ, ಪಕ್ಷದ ಹೈ ಕಮಾಂಡ್ ಸಿದ್ದರಾಮಯ್ಯ ಅವರನ್ನು ಕೇಳದೆ ಕುಮಾರಸ್ವಾಮಿ ಮುಖ್ಯಮಂತ್ರಿ ಮಾಡಿದ್ದು ಸಹಿಸಿಕೊಳ್ಳಲು ಸಾಧ್ಯವಾಗಲಿಲ್ಲ. ರಾಜಕೀಯ ವೈರತ್ವದಿಂದ ಸಮ್ಮಿಶ್ರ ಸರ್ಕಾರವನ್ನು ಸಿದ್ದರಾಮಯ್ಯ ಉರುಳಿಸಿದರು ಎಂದು ಗಂಭೀರ ಸ್ವರೂಪದ ಆರೋಪ ಮಾಡಿದ್ದಾರೆ.
ಇದಕ್ಕೆ ನಾನು ಪ್ರತಿಕ್ರಿಯಿಸಬಾರದು ಎಂದು ಕೊಂಡಿದ್ದೆ. ಆದರೆ ನಾನು ಮೌನವಾಗಿದ್ದರೆ ಜನರಿಗೆ ತಪ್ಪು ಸಂದೇಶ ಹೋಗಲಿದೆ ಎಂಬ ಕಾರಣಕ್ಕೆ ನಾನು ಮಾತನಾಡುತ್ತಿದ್ದೇನೆ. ದೇವೇಗೌಡರು ನನ್ನ ವಿರುದ್ದ ಮಾಡಿರುವ ಎಲ್ಲ ಆರೋಪಗಳು ರಾಜಕೀಯ ದುರದ್ದೇಶದಿಂದ ಕೂಡಿದೆ. ಇದೆಲ್ಲಾ ಆಧಾರ ರಹಿತ ರಾಜಕೀಯ ದುರುದ್ದೇಶದಿಂದ ಮಾಡಿರುವ ಆರೋಪ ಎಂದಿದ್ದಾರೆ.
ಸಮ್ಮಿಶ್ರ ಸರ್ಕಾರ ಪತನವಾಗಲು ದೇವೇಗೌಡರು, ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಹೆಚ್.ಡಿ. ರೇವಣ್ಣ ಕಾರಣ ಎಂದು ಶಾಸಕರು ಆರೋಪಿಸುತ್ತಿದ್ದಾರೆ.
ನಾವು 80 ಜನ ಶಾಸಕರು ಇದ್ದರೂ 38 ಶಾಸಕರು ಇರುವ ಜೆಡಿಎಸ್ ಪಕ್ಷಕ್ಕೆ ಬೆಂಬಲ ಕೊಟ್ಟಿದ್ದೇವೆ. 14 ತಿಂಗಳು ಸಂಪೂರ್ಣ ಸಹಕಾರ ನೀಡಿದ್ದೇವೆ. ಅವರ ಅಧಿಕಾರದಲ್ಲಿ ಹಸ್ತಕ್ಷೇಪ ನಡೆಸಿಲ್ಲ. ಸಮ್ಮಿಶ್ರ ಸರ್ಕಾರ ಬೀಳಿಸುವ ನೀಚ ರಾಜಕಾರಣ ಮಾಡುವುದಿಲ್ಲ.ಅದೇನಿದ್ದರು ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಹುಟ್ಟುಗುಣ ಎಂದು ಆಗ್ರಹಿಸಿದ್ದಾರೆ.
ಕ್ಷೇತ್ರದ ಕೆಲಸಗಳನ್ನು ಮಾಡಿಕೊಟ್ಟಿದ್ದರೆ ಸರ್ಕಾರ ಪತನವಾಗುತ್ತಿರಲಿಲ್ಲ. ಏಕಪಕ್ಷೀಯ ತೀರ್ಮಾನ. ಮಂತ್ರಿಗಳು ಹಾಗೂ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲಿಲ್ಲ. ಇವರ ನಡವಳಿಕೆಯಿಂದ ಆಡಳಿತ ವೈಖರಿಯಿಂದ ಸರ್ಕಾರ ಪತನವಾಯಿತು ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ