ಬೆಂಗಳೂರು :
ಅತೃಪ್ತ ಶಾಸಕರ ಅಸಮಾಧಾನ ನಿವಾರಿಸಲು ತೆರಳಿರುವ ಡಿ.ಕೆ.ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಗರಂ ಆಗಿದ್ದಾರೆ ಎನ್ನಲಾಗಿದೆ.
ಮುಂಬಯಿಗೆ ತೆರಳುವ ಮುನ್ನ ಡಿಕೆ ಶಿವಕುಮಾರ್ ಮಂಗಳವಾರ ರಾತ್ರಿ 3 ಗಂಟೆಗೂ ಹೆಚ್ಚು ಕಾಲ ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಜತೆ ಚರ್ಚೆ ನಡೆಸಿದ್ದರು. ಆದರೆ ಮುಂಬಯಿಗೆ ತೆರಳುತ್ತಿರುವ ವಿಷಯವನ್ನು ಕಾಂಗ್ರೆಸ್ ಹಿರಿಯ ಮುಖಂಡರ ಜತೆ ಡಿಕೆಶಿ ಚರ್ಚೆ ನಡೆಸಲಿಲ್ಲ ಎನ್ನುವುದು ಆಕ್ಷೇಪಕ್ಕೆ ಕಾರಣವಾಗಿದೆ.
ಸಿಎಂ ಜೊತೆ ಮಾತನಾಡಿಕೊಂಡು ಹೋಗಿ ಒನ್ ಮ್ಯಾನ್ ಶೋ ಕೊಡುತ್ತಿದ್ದಾರೆ. ಇದು ನಮ್ಮ ಪಕ್ಷದ ನಿರ್ಧಾರ ಅಲ್ಲ ಎಂದು ಡಿಕೆಶಿ ನಡೆಯ ಬಗ್ಗೆ ಗುಲಾಂನಬಿ ಆಜಾದ್ ಬಳಿಯು ಸಿದ್ದರಾಮಯ್ಯ ಹೇಳಿದ್ದಾರೆ ಎನ್ನಲಾಗಿದೆ.
ಮುಂಬಯಿಗೆ ತೆರಳಿರ ಡಿಕೆಶಿಗೆ ಹೋಟೆಲ್ ಒಳಗೆ ಹೋಗಲು ಬಿಡಲಿಲ್ಲ. ಬೀದಿಯಲ್ಲಿಯೇ ನಿಂತುಕೊಂಡಿದ್ದಾರೆ. ಇಡೀ ದೇಶ ಈಗ ಮುಂಬಯಿ ಹೋಟೆಲ್‌ನತ್ತ ನೋಡುತ್ತಿದೆ. ಇದು ಪಕ್ಷದ ವರ್ಚಸ್ಸಿಗೆ ಧಕ್ಕೆ ತಂದಿದೆ ಎಂದು ಸಿದ್ದರಾಮಯ್ಯ ಆಪ್ತರು ಹಾಗೂ ಹಿರಿಯ ನಾಯಕರಿಗೆ ತಿಳಿಸಿದ್ದಾರೆ ಎಂದು ತಿಳಿದುಬಂದಿದೆ. ಮಹಾರಾಷ್ಟ್ರದಲ್ಲಿ ರಾಜ್ಯ ಕಾಂಗ್ರೆಸ್ ನಾಯಕರಿಗೆ ಮಹಾರಾಷ್ಟ್ರ ಸರ್ಕಾರ ಮುಜುಗರ ಉಂಟು ಮಾಡಿದೆ ಎಂದು ಸಿದ್ದರಾಮಯ್ಯ ತಮ್ಮ ಆಪ್ತರ ಬಳಿ ಅಸಮಾದಾನ ಹೊರಹಾಕಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
