ಬೆಂಗಳೂರು:
ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಎಲ್ಲಾ ಶಾಸಕರು ಕಡ್ಡಾಯವಾಗಿ ಹಾಜರಾಗಬೇಕು. ಗೈರು ಹಾಜರಾದಲ್ಲಿ ಶಿಸ್ತು ಕ್ರಮ ಜರುಗಿಸುವುದಾಗಿ ಕಾಂಗ್ರೆಸ್ ಪಕ್ಷದ ಶಾಸಕಾಂಗ ನಾಯಕ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.

ಜನವರಿ 18 ರಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಪಕ್ಷದ ಶಾಸಕರಿಗೆ ಕಡ್ಡಾಯವಾಗಿ ಹಾಜರಿರಲು ಪತ್ರ ಬರೆದಿದ್ದಾರೆ. ಗೈರು ಹಾಜರಾದಲ್ಲಿ ಶಾಸಕರ ಪ್ರಾಥಮಿಕ ಸದಸ್ಯತ್ವ ರದ್ದು ಪಡಿಸುವ ಎಚ್ಚರಿಕೆಯನ್ನು ನೀಡಿದ್ದಾರೆ.
ರಾಜ್ಯದಲ್ಲಿ ನಡೆದಿರುವ ಅನಿರೀಕ್ಷಿತ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಜನವರಿ 18 ರಂದು ನಡೆಯಲಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಗಮನ ಸೆಳೆದಿದೆ. ಸಭೆಗೆ ಅತೃಪ್ತ ಶಾಸಕರು ಭಾಗವಹಿಸುತ್ತಾರೆಯೇ ಇಲ್ಲವೇ ಎಂಬುದನ್ನು ಕಾದು ನೋಡಬೇಕಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








