ಬೆಂಗಳೂರು :
ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ, ಪ್ರತಿಪಕ್ಷವಾಗಿ ಕೆಲಸ ನಿರ್ವಹಿಸುತ್ತೇವೆ. ಕಾಂಗ್ರೆಸ್ ಜೆಡಿಎಸ್ ನಾಯಕರಿಗೆ ಭಯ ಬೇಡ ಎಂದಿರುವ ಬಿ.ಎಸ್. ಯಡಿಯೂರಪ್ಪ ಅವರು ನುಡಿದಂತೆ ನಡೆಯಲಿ, ರಾಜ್ಯದ ಜನರ ನಂಬಿಕೆ ಉಳಿಸಿಕೊಳ್ಳಲಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
'ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದಿಲ್ಲ, ಪ್ರತಿಪಕ್ಷವಾಗಿ ಕೆಲಸ ನಿರ್ವಹಿಸುತ್ತೇವೆ. ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರಿಗೆ ಭಯ ಬೇಡ' ಎಂದಿರುವ ಬಿ.ಎಸ್.ಯಡಿಯೂರಪ್ಪ ಅವರು ನುಡಿದಂತೆ ನಡೆಯಲಿ, ರಾಜ್ಯದ ಜನರ ನಂಬಿಕೆ ಉಳಿಸಿಕೊಳ್ಳಲಿ.@INCKarnataka
— Siddaramaiah (@siddaramaiah) January 19, 2019
ಇಂದು ಬೆಳಗ್ಗೆ ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ದೆಹಲಿಯಲ್ಲಿದ್ದ ಬಿಜೆಪಿ ಶಾಸಕರನ್ನು ಕರೆಸಿಕೊಂಡು ರಾಜ್ಯದ ಬರನಿರ್ವಹಣೆಯ ಸಮೀಕ್ಷೆಗೆ ಕಳುಹಿಸುವ ಬಿ.ಎಸ್. ಯಡಿಯೂರಪ್ಪ ಅವರ ನಿರ್ಧಾರವನ್ನು ಸ್ವಾಗತಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.
ದೆಹಲಿಯಲ್ಲಿದ್ದ ಬಿಜೆಪಿ ಶಾಸಕರನ್ನು ಕರೆಸಿಕೊಂಡು ರಾಜ್ಯದ ಬರನಿರ್ವಹಣೆಯ ಸಮೀಕ್ಷೆಗೆ ಕಳುಹಿಸುವ ಬಿ.ಎಸ್.ಯಡಿಯೂರಪ್ಪ ಅವರ ನಿರ್ಧಾರವನ್ನು ಸ್ವಾಗತಿಸುತ್ತೇನೆ.@INCKarnataka
— Siddaramaiah (@siddaramaiah) January 19, 2019
ನಾವು ಸರ್ಕಾರ ಅಸ್ಥಿರಗೊಳಿಸುವ ಕೆಲಸ ಮಾಡುವುದಿಲ್ಲ. ಕಾಂಗ್ರೆಸ್, ಜೆಡಿಎಸ್ನವರಿಗೆ ಯಾವುದೇ ಭಯಬೇಡ, ಬಿಜೆಪಿ ಶಾಸಕರು ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಬಳಿಕ ನಮ್ಮ ಮುಂದಿನ ಕೆಲಸ ಬರ ಅಧ್ಯಯನ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ