ಬೆಂಗಳೂರು :
ಬಹುನಿರೀಕ್ಷಿತ ಶಿರಾ ವಿಧಾನಸಭೆ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಾಜಿ ಸಚಿವ ಟಿ.ಬಿ.ಜಯಚಂದ್ರ ಅವರು ಸ್ಪರ್ಧೆ ಮಾಡಲಿದ್ದಾರೆ.
ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಸುದೀರ್ಘ ಸಭೆಯ ಬಳಿಕ ಕಾಂಗ್ರೆಸ್ ಅಭ್ಯರ್ಥಿಯನ್ನು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಘೊಷಣೆ ಮಾಡಿದ್ದಾರೆ. ಮಾಜಿ ಸಚಿವ ಟಿ.ಬಿ. ಜಯಚಂದ್ರ ಅವರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಶಿರಾ ಉಪಚುನಾವಣೆಯಲ್ಲಿ ಸ್ಪರ್ಧೆ ಮಾಡಲಿದ್ದಾರೆ ಎಂದರು.
ಮಾಜಿ ಶಾಸಕ ಕೆ.ಎನ್. ರಾಜಣ್ಣನ ಅವರೇ ಟಿ.ಬಿ. ಜಯಚಂದ್ರ ಅವರ ಹೆಸರು ಸೂಚಿಸಿದ್ದಾರೆ. ರಾಜಣ್ಣ ಅವರ ಅಭಿಪ್ರಾಯವನ್ನು ನಾವು ಪಡೆದಿದ್ದೇವೆ. ನಮ್ಮ ಪಕ್ಷದ ವರಿಷ್ಠರಿಗೆ ಇದನ್ನೇ ಕಳಿಸಿಕೊಡುತ್ತೇವೆ ಎಂದಿದ್ದಾರೆ.
ಶಿರಾ ಉಪಚುನಾವಣೆಯನ್ನು ಮಾಜಿ ಗೃಹ ಸಚಿವ ಡಾ. ಪರಮೇಶ್ವರ್ ನೇತೃತ್ವದಲ್ಲಿ ಎದುರಿಸುತ್ತೇವೆ. ಮಾಜಿ ಶಾಸಕ ಕೆ.ಎನ್.ರಾಜಣ್ಣ ಅವರು ಉಪಾಧ್ಯಕ್ಷರಾಗಿ ಜೊತೆಗೆ ಇರಲಿದ್ದಾರೆ ಎಂದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ