ಬೆಂಗಳೂರು :
ಅನಾರೋಗ್ಯದಿಂದ ನಿಧನರಾದಂತ ದಿವಂಗತ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮಗೆ ಜೆಡಿಎಸ್ ನಿಂದ ಟಿಕೆಟ್ ಅನ್ನು ಘೋಷಣೆ ಮಾಡಲಾಗಿದೆ.
ತೀವ್ರ ಕುತೂಹಲದ ಕಣವಾಗಿರುವಂತ ಶಿರಾ ಉಪ ಚುನಾವಣೆಗೆ ಜೆಡಿಎಸ್ ನಿಂದ ಅಂತಿಮವಾಗಿ ಟಿಕೆಟ್ ಫೈನಲ್ ಮಾಡಲಾಗಿದೆ.
ಈ ಕುರಿತಂತೆ ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು, ಶಿರಾ ಉಪ ಚುನಾವಣೆಗೆ ದಿ.ಸತ್ಯನಾರಾಯಣ್ ಪತ್ನಿ ಅಮ್ಮಾಜಮ್ಮಗೆ ಜೆಡಿಎಸ್ ನಿಂದ ಟಿಕೆಟ್ ಘೋಷಣೆ ಮಾಡಿದ್ದಾರೆ. ಈ ಮೂಲಕ ಶಿರಾ ಉಪ ಚುನಾವಣೆಯಲ್ಲಿ ಅನುಕಂಪದ ಅಲೆಯಲ್ಲಿ ಜಯಗಳಿಸುವಂತ ತಂತ್ರಗಾರಿಕೆಯನ್ನು ಜೆಡಿಎಸ್ ಅನುಸರಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ