ಬೆಂಗಳೂರು :

ಕೊರೊನಾ ವೈರಸ್ ಸೋಂಕಿನಿಂದ ಚಿಕಿತ್ಸೆ ಪಡೆಯುತ್ತಿದ್ದ ಶಿರಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಅಮ್ಮಾಜಮ್ಮ ಅವರು ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಕೊರೊನಾ ವೈರಸ್ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಅಮ್ಮಾಜಮ್ಮ ಅವರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಯ ಬಳಿಕ ಗುಣಮುಖರಾಗಿರುವ ಅವರು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಸದ್ಯ ಶಿರಾದಲ್ಲಿರುವ ತಮ್ಮ ನಿವಾಸಕ್ಕೆ ಪ್ರಯಾಣಿಸಿರುವ ಅಮ್ಮಾಜಮ್ಮ, ಮೂರ್ನಾಲ್ಕು ದಿನ ವಿಶ್ರಾಂತಿ ಪಡೆಯಲಿದ್ದಾರೆ. ಬಳಿಕ ಚುನಾವಣಾ ಪ್ರಚಾರದ ಅಖಾಡಕ್ಕೆ ಅಮ್ಮಾಜಮ್ಮ ಆಗಮಿಸಲಿದ್ದಾರೆ.
ಈಗಾಗಲೇ ಅಭ್ಯರ್ಥಿ ಅನುಪಸ್ಥಿತಿಯಲ್ಲಿ ಪುತ್ರ ಸತ್ಯಪ್ರಕಾಶ್ ಪ್ರಚಾರ ಆರಂಭಿಸಿದ್ದಾರೆ. ಸೋಮವಾರದ ಬಳಿಕ ಪ್ರಚಾರದ ಅಬ್ಬರ ಮತ್ತಷ್ಟು ಜೋರಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








