ಶಿರಾ ಉಪ ಚುನಾವಣೆ : ಬಿ.ಫಾರಂ ಇಲ್ಲದೆ ನಾಮಪತ್ರ ಸಲ್ಲಿಸಿದ ಟಿ.ಬಿ.ಜೆ!!!

ಶಿರಾ :

    ಶಿರಾ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಇಂದು ಟಿ.ಬಿ.ಜಯಚಂದ್ರ ಅವರು ನಾಮಪತ್ರ ಸಲ್ಲಿಸಿದ್ದು,  ಚುನಾವಣಾಧಿಕಾರಿ ಹಾಗೂ ಉಪವಿಭಾಗಧಿಕಾರಿ ಡಾ. ನಂದಿನಿದೇವಿ ಅವರು ನಾಮಪತ್ರ ಸ್ವೀಕರಿಸಿದರು.

    ನಾಮಪತ್ರ ಸಲ್ಲಿಸಿದ ಬಳಿಕ ಮಾತನಾಡಿದ ಜಯಚಂದ್ರ, ಕಾಂಗ್ರೆಸ್ ಬಿ.ಫಾರಂ ಇಲ್ಲದೆ ಇಂದು ನಾಮಪತ್ರ ಸಲ್ಲಿಸಿದ್ದು ಅಧಿಕೃತವಾಗಿ ರಾಜ್ಯ ಕಾಂಗ್ರೆಸ್ ನಾಯಕ ರ ಸಮ್ಮುಖದಲ್ಲಿ ಅ. 15ರಂದು ಉಮೇದುವಾರಿಕೆ ಸಲ್ಲಿಸುವುದಾಗಿ ತಿಳಿಸಿದ್ದಾರೆ.

     ಇನ್ನು ತಮಗೆ ಟಿಕೆಟ್ ನೀಡುವ ವಿಚಾರವಾಗಿ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಯಿಂದ ವ್ಯಕ್ತವಾಯಿತೆನ್ನಲಾದ ಆಕ್ಷೇಪ ಹಾಗೂ ರಾಜಕೀಯ ವಿದ್ಯಮಾನಗಳ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಟಿ.ಬಿ.ಜಯಚಂದ್ರ ಮೊದಲ ದಿನವೇ ಉಮೇದುವಾರಿಕೆ ಸಲ್ಲಿಸಿರುವುದು ಚರ್ಚೆಗೆ ಗ್ರಾಸವಾಗಿಸಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link
Powered by Social Snap