ಶಿರಾ :
ತೀವ್ರ ಕುತೂಹಲ ಮೂಡಿಸಿರುವ ಶಿರಾ ವಿಧಾನಸಭೆ ಉಪಚುನಾವಣೆಯ ಪ್ರಚಾರಕ್ಕಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ 15 ದಿನ ಶಿರಾ ತಾಲೂಕಿನಲ್ಲಿ ವಾಸ್ತವ್ಯ ಹೂಡಲಿದ್ದಾರೆ ಎನ್ನಲಾಗಿದೆ.
ಬೆಂಗಳೂರಿನ ಜೆ.ಪಿ ಭವನದಲ್ಲಿ ಶುಕ್ರವಾರ ಶಿರಾ ಶಾಸಕರಾಗಿದ್ದ ಸತ್ಯನಾರಾಯಣ ಅವರ ಪತ್ನಿ ಅಮ್ಮಾಜಮ್ಮ, ಪುತ್ರ ಬಿ.ಎಸ್. ಸತ್ಯಪ್ರಕಾಶ್ ಸೇರಿದಂತೆ ತಾಲ್ಲೂಕಿನ ಜೆಡಿಎಸ್ ಮುಖಂಡರೊಂದಿಗೆ ನಡೆಸಿದ ಸಭೆಯಲ್ಲಿ ಅವರು ಈ ಭರವಸೆ ನೀಡಿದ್ದಾರೆ.
ಈ ವೇಳೆ ಶಿರಾ ವಿಧಾನಸಭೆ ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಲು ಎಲ್ಲರೂ ಕಾರ್ಯಪ್ರವೃತ್ತರಾಗಬೇಕು. ಇನ್ನು ಶಿರಾ ವಿಧಾನಸಭೆ ಉಪಚುನಾವಣೆಗೆ ಪಕ್ಷದ ವರಿಷ್ಠರೊಂದಿಗೆ ಚರ್ಚಿಸಿ ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು. ಯಾರಿಗೆ ಟಿಕೆಟ್ ಸಿಕ್ಕರೂ ಎಲ್ಲರೂ ಪ್ರಾಮಾಣಿಕವಾಗಿ ಕೆಲಸ ಮಾಡಬೇಕು. ಗ್ರಾಮಗಳಿಗೆ ಭೇಟಿ ನೀಡಿ ಪಕ್ಷ ಸಂಘಟಿಸುವಂತೆ ಸೂಚನೆ ನೀಡಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ