ಶಿರಾ :

ಅನಾರೋಗ್ಯದಿಂದ ಬಳಲುತ್ತಿದ್ದ ಶಿರಾ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಸತ್ಯನಾರಾಯಣ್ ನಿಧನ ಹೊಂದಿದ್ದಾರೆ.
ನ್ಯೂಮೋನಿಯಾದಿಂದ ಬಳಲುತ್ತಿದ್ದ ಶಾಸಕರು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಶಾಸಕರಿಗೆ ಲಿವರ್ ಡ್ಯಾಮೇಜ್ ಆಗಿದ್ದ ಹಿನ್ನೆಲೆಯಲ್ಲಿ ಲಿವರ್ ಟ್ರಾನ್ಸ್’ಪ್ಲಾಂಟ್’ಗೆ ಸಿದ್ಧತೆ ಮಾಡಿಕೊಳ್ಳಲಾಗಿತ್ತು ಎನ್ನಲಾಗಿದೆ.
ಇಂದು ಮಧ್ಯಾಹ್ನ 12.30ರ ಸುಮಾರಿಗೆ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದಿದ್ದಾರೆ.
ಸತ್ಯನಾರಾಯಣ ಅವರ ನಿಧನಕ್ಕೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಸಂತಾಪ ವ್ಯಕ್ತಪಡಿಸಿದ್ದಾರೆ. “ಮಾಜಿ ಸಚಿವರು ಮತ್ತು ಶಾಸಕರು ಹಾಗೂ ನನ್ನ ಸನ್ಮಿತ್ರರು ಆದ ಬಿ. ಸತ್ಯನಾರಾಯಣ್ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ,” ಎಂದು ಅವರು ತಮ್ಮ ಸಂತಾಪ ಸಂದೇಶದಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








