ಶಿರಾ :
ಕಾರುಗಳ ಮುಖಾಮುಖಿ ಡಿಕ್ಕಿ ಸಂಭವಿಸಿ ಇಬ್ಬರು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ದುರ್ಘಟನೆ ಶಿರಾ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 48ರ ಶಿವಾಜಿನಗರದ ಬಳಿ ನಡೆದಿದೆ.
ಬೆಂಗಳೂರಿನ ಕಿರ್ಲೋಸ್ಕರ್ ಕಂಪನಿಯ ಇಂಜಿನಿಯರ್ ಶ್ಯಾಂ ಸುಂದರ್(40), ರಾಘವೇಂದ್ರ ಜ್ಯೋಷಿ(50) ಮೃತರು. ಹಿರಿಯೂರು ಭಾಗದಿಂದ ಬೆಂಗಳೂರಿಗೆ ಸಾಗುತ್ತಿದ್ದ ಕಾರು ಚಾಲಕನ ಅಜಾಗರೂಕತೆಯಿಂದ ರಸ್ತೆ ಡಿವೈಡರ್ ದಾಟಿ ಮತ್ತೊಂದು ಬದಿಯಲ್ಲಿ ಬೆಂಗಳೂರಿಂದ ಚಿತ್ರದುರ್ಗದ ಕಡೆಗೆ ಹೋಗುತ್ತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.
ಘಟನೆಯಲ್ಲಿ ಮತ್ತಿಬ್ಬರಾದ ಶೇಖರ್ , ಕಾಲಿ ಮುತ್ತು ಗಂಭೀರವಾಗಿ ಗಾಯಗೊಂಡಿದ್ದು ಇವರನ್ನು ತುಮಕೂರು ಜಿಲ್ಲಾಸ್ವತ್ರೆಗೆ ದಾಖಲು ಮಾಡಲಾಗಿದೆ. ಈ ಸಂಬಂಧ ಶಿರಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
