ಶಿರಸಿ :

ಲಾಕ್‌ಡೌನ್ ಸಡಿಲಿಕೆಯ ನಂತರ ಬಾಗಿಲು ತೆರೆದಿದ್ದ ಇಲ್ಲಿನ ಮಾರಿಕಾಂಬಾ ದೇವಾಲಯದಲ್ಲಿ ಭಾನುವಾರದಿಂದ ಒಂದು ವಾರ ದೇವಿಯ ದರ್ಶನಕ್ಕೆ ಭಕ್ತರಿಗೆ ನಿರ್ಬಂಧ ವಿಧಿಸಲಾಗಿದೆ.
ಉತ್ತರ ಕನ್ನಡ ಜಿಲ್ಲೆಯಲ್ಲಿ ಮತ್ತೆ ಕೊರೊನಾ ವೈರಸ್ ಮಹಾಮಾರಿ ರೋಗವು ಅಟ್ಟಹಾಸ ಮೆರೆಯುತ್ತಿದೆ.
ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಾಲಯ ಪಕ್ಕದ ಮನೆಯ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿರುವ ಕಾರಣ, ಮುನ್ನೆಚ್ಚರಿಕೆಯಾಗಿ ದೇವಸ್ಥಾನ ಆಡಳಿತ ಮಂಡಳಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ದೇವಸ್ಥಾನ ಸಿಬ್ಬಂದಿಗೆ ರಜೆ ನೀಡಲಾಗಿದ್ದು, ದೇವಿಗೆ ನಿತ್ಯದ ಪೂಜೆ ನಡೆಯುತ್ತದೆ. ಆದರೆ, ದರ್ಶನಕ್ಕೆ ಅವಕಾಶವಿಲ್ಲ ಎಂದು ದೇವಾಲಯದ ಧರ್ಮದರ್ಶಿ ಮಂಡಳಿ ಅಧ್ಯಕ್ಷ ಡಾ.ವೆಂಕಟೇಶ ನಾಯ್ಕ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








