ಕಟ್ಟಡ ಕುಸಿತ : ಸೇನಾ ಸಿಬ್ಬಂದಿ ಸೇರಿ 7 ಮಂದಿ ಸಾವು!!!

ಶಿಮ್ಲಾ: 

       ಬಹುಮಹಡಿ ಕಟ್ಟಡ ಕುಸಿದು ಸೇನಾ ಸಿಬ್ಬಂದಿ ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ಘಟನೆ ಹಿಮಾಚಲ ಪ್ರದೇಶದ ಸೋಲನ್‍ನಲ್ಲಿ ನಡೆದಿದೆ.

      ಭಾನುವಾರ ಸೋಲನ್ ಜಿಲ್ಲೆಯಲ್ಲಿ ಬಹುಮಹಡಿ ಕಟ್ಟಡ ಕುಸಿದು ಬಿದ್ದಿದೆ. ಕಟ್ಟಡದ ಅವಶೇಷಗಳಡಿ ಸೈನ್ಯದ ಯೋಧರೂ ಸೇರಿ 37 ಮಂದಿ ಸಿಲುಕಿದ್ದಾರೆ ಎಂದು ಶಂಕಿಸಲಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

      ಭಾನುವಾರ ಮಧ್ಯಾಹ್ನ 4 ಗಂಟೆ ಸುಮಾರಿಗೆ ಈ ದುರಂತ ಸಂಭವಿಸಿದೆ. ರಾಜ್ಯ ರಾಜಧಾನಿ ಶಿಮ್ಲಾದಿಂದ 45 ಕಿ.ಮೀ ದೂರದಲ್ಲಿರುವ ಸೋಲನ್‍ನ ಕುಮಾರ್ಹಟ್ಟಿ-ನಹಾನ್ ಹೆದ್ದಾರಿಯಲ್ಲಿ ಈ ಕಟ್ಟಡ ಇದ್ದು, ಭಾರೀ ಮಳೆಯಿಂದಾಗಿ ಕುಸಿದಿದೆ ಎನ್ನಲಾಗಿದೆ. ಸದ್ಯ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗಳಿಗೆ ರವಾನಿಸಲಾಗಿದ್ದು, ಉಳಿದವರ ರಕ್ಷಣೆಗಾಗಿ ಕಾರ್ಯಾಚರಣೆ ಪ್ರಗತಿಯಲ್ಲಿದೆ.

       ಅವಘಡ ಸಂಭವಿಸದ ಬಳಿಕ ಈವರೆಗೂ 18 ಸೈನಿಕರು ಹಾಗೂ ಐವರು ನಾಗರಿಕರನ್ನೂ ರಕ್ಷಿಸಲಾಗಿದೆ. ಇಬ್ಬರು ಮೃತರ ದೇಹಗಳನ್ನು ಹೊರ ತೆಗೆಯಲಾಗಿದೆ.

      ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಇಂದು ಮಧ್ಯಾಹ್ನದೊಳಗೆ ಪೂರ್ಣಗೊಳಿಸಲಾಗುವುದು. ಈ ಘಟನೆಯಲ್ಲಿ ಆರು ಸೇನಾ ಸಿಬ್ಬಂದಿ ಮತ್ತು ಸಾರ್ವಜನಿಕರೊಬ್ಬರು ಮೃತಪಟ್ಟಿದ್ದಾರೆ ಎಂದು ಸೋಲನ್‍ನ ಉಪ ಆಯುಕ್ತ ಕೆ.ಸಿ.ಚಮನ್ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

 

Recent Articles

spot_img

Related Stories

Share via
Copy link