ನೂತನ ವಿಜಯನಗರ ಜಿಲ್ಲೆಗೆ 6 ತಾಲೂಕುಗಳು ಸೇರ್ಪಡೆ!!

ಬೆಂಗಳೂರು :

     ನೂತನ ವಿಜಯನಗರ ಜಿಲ್ಲೆಗೆ 6 ತಾಲೂಕುಗಳನ್ನು ಸೇರಿಸಿ ವಿಜಯನಗರ ಜಿಲ್ಲೆ ಅಸ್ತಿತ್ವಕ್ಕೆ ತರಲಾಗಿದೆ ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ತಿಳಿಸಿದ್ದಾರೆ.

      ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಾಧುಸ್ವಾಮಿ, ನೂತನ ವಿಜಯನಗರ ಜಿಲ್ಲೆಗೆ ಹೊಸಪೇಟೆ,  ಕೊಟ್ಟೂರು, ಕೂಡ್ಲಿಗಿ, ಹರಪನಹಳ್ಳಿ, ಹಗರಿಬೊಮ್ಮನಹಳ್ಳಿ, ಹೂವಿನಹಡಗಲಿ ಸೇರಿ ಒಟ್ಟು 6 ತಾಲೂಕುಗಳನ್ನು ಸೇರಿಸಿ ವಿಜಯನಗರ ಜಿಲ್ಲೆಯನ್ನು ಅಸ್ತಿತ್ವಕ್ಕೆ ತರಲಾಗಿದೆ ಎಂದು ಹೇಳಿದರು.

    ಬಳ್ಳಾರಿ ಜಿಲ್ಲೆಯಲ್ಲಿ 11 ತಾಲೂಕುಗಳು ಮತ್ತು ಮೂರು ಕಂದಾಯ ಉಪವಿಭಾಗಳಿದ್ದವು. ಸದ್ಯ ಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆಯನ್ನು ರಚಿಸಿರುವ ಕಾರಣ ಆರು ತಾಲೂಕುಗಳು ಹೊಸ ಜಿಲ್ಲೆಗೆ ಸೇರ್ಪಡೆಯಾಗಿದೆ. ಹೀಗಾಗಿ ಬಳ್ಳಾರಿ ಜಿಲ್ಲೆಗೆ ಸದ್ಯ ಐದು ತಾಲೂಕುಗಳು ಉಳಿದಿವೆ. ಬಳ್ಳಾರಿ, ಸಿರಗುಪ್ಪ, ಸಂಡೂರು, ಕಂಪ್ಲಿ ಮತ್ತು ಕುರಗೋಡು ತಾಲೂಕುಗಳು ಬಳ್ಳಾರಿ ಜಿಲ್ಲೆಯ ಭಾಗವಾಗಿ ಮುಂದುವರಿಯಲಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link