ಹಾಸನ:
ಇಂದು ಹಾಸನ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎ. ಮಂಜು ಪರ ಮಾಜಿ ಕೇಂದ್ರ ಸಚಿವ ಹಾಗೂ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಪ್ರಚಾರ ನಡೆಸಲಿದ್ದಾರೆ.
ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಬೂವನಹಳ್ಳಿಯ ಹೆಲಿಪ್ಯಾಡ್ ಗೆ ಆಗಮಿಸಲಿರೋ ಕೃಷ್ಣ, ಜಿಲ್ಲೆಯ ಅರಸೀಕೆರೆಯ ಗಂಡಸಿ ಮತ್ತು ಬೇಲೂರು ತಾಲೂಕಿನ ಹಗರೆಯಲ್ಲಿ ಪ್ರಚಾರ ಮಾಡಲಿದ್ದಾರೆ.
ಬಳಿಕ 12 ಗಂಟೆಗೆ ಬಿಜೆಪಿ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 1:30ಕ್ಕೆ ಭೋಜನ ಮುಗಿಸಿ, ನಂತರ ಚನ್ನರಾಯಪಟ್ಟಣದಲ್ಲಿ ಎ.ಮಂಜು ಪರ ರೋಡ್ ಶೋ ನಡೆಸಲಿದ್ದಾರೆ. ಎಸ್.ಎಂ.ಕೃಷ್ಣಗೆ ಎ.ಮಂಜು, ಶಾಸಕರಾದ ಪ್ರೀತಂಗೌಡ ಹಾಗೂ ಬೆಳ್ಳಿ ಪ್ರಕಾಶ್ ಸಾಥ್ ನೀಡಲಿದ್ದಾರೆ.
ಲೋಕಸಭಾ ಚುನಾವಣೆ ದಿನಾಂಕ ಪ್ರಕಟವಾದ ನಂತರ ಪ್ರಚಾರಕ್ಕೆ ಇದೇ ಮೊದಲ ಬಾರಿಗೆ ಎಸ್ ಎಂ ಕೆ ಹಾಸನಕ್ಕೆ ಭೇಟಿ ನೀಡುತ್ತಿದ್ದಾರೆ. ಬೆಳಗ್ಗೆ ಹೆಲಿಕಾಪ್ಟರ್ ಮೂಲಕ ಬೂವನಹಳ್ಳಿಯ ಹೆಲಿಪ್ಯಾಡ್ ಗೆ ಆಗಮಿಸಲಿರೋ ಕೃಷ್ಣ, ಜಿಲ್ಲೆಯ ಅರಸೀಕೆರೆಯ ಗಂಡಸಿ ಮತ್ತು ಬೇಲೂರು ತಾಲೂಕಿನ ಹಗರೆಯಲ್ಲಿ ಪ್ರಚಾರ ಮಾಡಲಿದ್ದಾರೆ.
ಬಿಜೆಪಿ ಪರ ಪ್ರಚಾರ ನಡೆಸಲಿರೋ ಕೃಷ್ಣ ಎಂಟ್ರಿ ಜೆಡಿಎಸ್‍ನಲ್ಲಿ ಕುತೂಹಲ ಮೂಡಿಸಿದ್ದು, ಕೃಷ್ಣ ಹಾಗೂ ದೇವೇಗೌಡರ ರಾಜಕೀಯ ಪೈಪೋಟಿಗೆ ಪ್ರಚಾರ ಕಣ ಸಾಕ್ಷಿಯಾಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ