ಬೆಂಗಳೂರು:
ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ರವರು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಪತ್ನಿ ಸಮೇತ ಭೇಟಿ ನೀಡಿದ್ದಾರೆ.
ಸದಾಶಿವನಗರದಲ್ಲಿನ ಶಿವಕುಮಾರ್ ಅವರ ನಿವಾಸಕ್ಕೆ ನಿನ್ನೆ ರಾತ್ರಿ ಪತ್ನಿ ಪ್ರೇಮಾ ಅವರ ಜೊತೆ ಭೇಟಿ ನೀಡಿದ ಎಸ್.ಎಂ.ಕೃಷ್ಣ, ಶಿವಕುಮಾರ್ ಮೇಲಿನ ಪ್ರಕರಣ ಹಾಗೂ ಜೈಲು ವಾಸ ಮತ್ತಿತರ ವಿಷಯಗಳ ಬಗ್ಗೆ ಮಾತನಾಡಿ ಚರ್ಚಿಸಿದ್ದಾರೆ ಎನ್ನಲಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಡಿ.ಕೆ.ಶಿವಕುಮಾರ್ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೆ ಒಳಗಾಗಿದ್ದರು. ದೆಹಲಿಯ ತಿಹಾರ್ ಜೈಲಿನಿಂದ ಅವರು ಬಿಡುಗಡೆಗೊಂಡ ಬಳಿಕ ಮೊದಲ ಬಾರಿಗೆ ಎಸ್.ಎಂ.ಕೃಷ್ಣ ಭೇಟಿ ಮಾಡಿದ್ದಾರೆ.
ಎಸ್.ಎಂ.ಕೃಷ್ಣ ಕಾಂಗ್ರೆಸ್ನಲ್ಲಿದ್ದಾಗ ಅವರಿಗೆ ಡಿ.ಕೆ.ಶಿವಕುಮಾರ್ ಆಪ್ತರಾಗಿದ್ದರು. ರಾಜಕೀಯೇತರವಾಗಿ ಇರುವ ವೈಯಕ್ತಿಕ ಬಾಂಧವ್ಯದಿಂದ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
