ತೇಜಸ್ವಿನಿ ಅನಂತ್ ಕುಮಾರ್ ರಾಜ್ಯ ಬಿಜೆಪಿ ಉಪಾಧ್ಯಕ್ಷೆ!

ಬೆಂಗಳೂರು:

       ದಿವಂಗತ ಕೇಂದ್ರ ಸಚಿವ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಅವರು ರಾಜ್ಯ ಬಿಜೆಪಿಯ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

      ತೇಜಸ್ವಿನಿ ಅನಂತ್ ಕುಮಾರ್ ಅವರು ರಾಜ್ಯ ಬಿಜೆಪಿ ಪಕ್ಷದ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಲು ನನಗೆ ಬಹಳ ಸಂತೋಷವಾಗುತ್ತದೆ. ಅವರಿಗೆ ನನ್ನ ಶುಭಾಶಯಗಳನ್ನು ತಿಳಿಸುತ್ತಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಟ್ವೀಟ್ ಮಾಡಿ ಶುಭಾಶಯ ತಿಳಿಸಿದ್ದಾರೆ. 

      ತೇಜಸ್ವಿನಿ ಅವರಿಗೆ ಬೆಂಗಳೂರು ದಕ್ಷಿಣದಿಂದ ಟಿಕೆಟ್ ನೀಡಲು ರಾಜ್ಯ ಬಿಜೆಪಿ ನಾಯಕರು ಮುಂದಾಗಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಟಿಕೆಟ್ ತಪ್ಪಿದ್ದು, ಬಿಜೆಪಿಯ ಯುವ ಮೋರ್ಚಾ ಅಧ್ಯಕ್ಷ ತೇಜಸ್ವಿ ಸೂರ್ಯಗೆ ದಕ್ಕಿತ್ತು. ಈಗ ತೇಜಸ್ವಿನಿ ಅವರಿಗೆ ಉಪಾಧ್ಯಕ್ಷೆ ಸ್ಥಾನವನ್ನು ನೀಡುವ ಮೂಲಕ ಭಿನ್ನಮತ ಶಮನಕ್ಕೆ ಬಿಜೆಪಿ ಹೈಕಮಾಂಡ್ ಮುಂದಾಗಿದೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ