ಜಮಖಂಡಿ :
ರಜೆಗೆಂದು ಊರಿಗೆ ಬಂದಿದ್ದ ಯೋಧ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ.
ಜಮಖಂಡಿ ತಾಲೂಕಿನ ಮಧರಖಂಡಿ ಗ್ರಾಮದ ಯೋಧ ನೀಲಕಂಠ ಘಟನಟ್ಟಿ (29) ಮೃತ ದುರ್ದೈವಿ. ಮಧ್ಯಪ್ರದೇಶದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಯೋಧ, ಜಮ್ಮುಕಾಶ್ಮೀರಕ್ಕೆ ವರ್ಗಾವಣೆಯಾದ ಬೆನ್ನಲ್ಲೇ ಒಂದು ತಿಂಗಳ ರಜೆಗೆಂದು ಸ್ವಗ್ರಾಮಕ್ಕೆ ಆಗಮಿಸಿದ್ದ.
ಮೃತ ಯೋಧ ತನ್ನ ಮಡದಿಯೊಂದಿಗೆ ಆಕೆಯ ತವರುಮನೆ ಮಹಾರಾಷ್ಟ್ರದ ಹುಲಜಂತಿಗೆ ಹೋಗಿ ಬರುವಾಗ ಕಾರು ಮತ್ತು ಬೈಕ್ ಮಧ್ಯೆ ಡಿಕ್ಕಿಯಾಗಿ ಈ ದುರ್ಘಟನೆ ಸಂಭವಿಸಿದೆ. ದುರಂತದಲ್ಲಿ ತೀವ್ರವಾಗಿ ಗಾಯಗೊಂಡಿರುವ ಹೆಂಡತಿಯ ಸ್ಥಿತಿ ಚಿಂತಾಜನಕವಾಗಿದೆ.
ಯೋಧನ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ತರಲಾಗಿದ್ದು, ಗ್ರಾಮ ಪಂಚಾಯತಿ ಆವರಣದಲ್ಲಿ ಯೋಧನ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಧುರಖಂಡಿ ಸರ್ಕಾರಿ ಪ್ರೌಢ ಶಾಲೆಯಲ್ಲಿ ಸಕಲ ಗೌರವದೊಂದಿಗೆ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ ಎಂದು ತಿಳಿದುಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
