ಕನ್ನಡದ ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಡಾ||ಎಸ್.ಕೆ.ಶಿವಕುಮಾರ್ ನಿಧನ!

ಬೆಂಗಳೂರು:

      ಬಾಹ್ಯಾಕಾಶ ಕೇಂದ್ರದ ನಿರ್ದೇಶಕರಾಗಿದ್ದ, ಪ್ರಸ್ತುತ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಸಂಸ್ಥೆಯ ಅಧ್ಯಕ್ಷರಾಗಿದ್ದ ವಿಜ್ಞಾನಿ ಡಾ. ಎಸ್‌.ಕೆ.ಶಿವಕುಮಾರ್ ಇಂದು(ಏ.13) ವಿಧಿವಶರಾಗಿದ್ದಾರೆ.

      ಜಾಂಡೀಸ್ ನಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿ, ಚಿಕಿತ್ಸೆ ಪಡೆಯುತ್ತಿದ್ದರು. ಆದರೀಗ ಚಿಕಿತ್ಸೆ ಫಲಕಾರಿಯಾಗದೆ ಅವರು ನಿಧನರಾಗಿದ್ದಾರೆ.

     ಇಸ್ರೋ ಲೇಔಟ್ನ ಅವರ ನಿವಾಸದಲ್ಲಿ ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯುವ ವ್ಯವಸ್ಥೆ ಕಲ್ಪಿಸಲಾಗಿದ್ದು, ಮಧ್ಯಾಹ್ನ 3 ಗಂಟೆಗೆ ಬನಶಂಕರಿಯಲ್ಲಿ ಅಂತಿಮ ಸಂಸ್ಕಾರ ನೆರವೇರಲಿದೆ.

       ಮೈಸೂರು ಮೂಲದವರಾದ ಶಿವಕುಮಾರ್​ ಚಂದ್ರಯಾನ-1ಗೆ ಟೆಲಿಮೆಟ್ರಿ ಸಿಸ್ಟಮ್​ ಅಭಿವೃದ್ಧಿಪಡಿಸಿದ ತಂಡದ ಭಾಗವಾಗಿದ್ದರು. ಇಸ್ರೋ ಸ್ಯಾಟಿಲೈಟ್​ ಸೆಂಟರ್​ ಹಾಗೂ ಇಸ್ರೋ ಟೆಲಿಮೆಟ್ರಿ ಟ್ರ್ಯಾಕಿಂಗ್ ಸೆಂಟರ್​​ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

      2015ರಲ್ಲಿ ಶಿವಕುಮಾರ್​ ಅವರಿಗೆ ಪದ್ಮಶ್ರೀ ಪುರಸ್ಕಾರ ನೀಡಿ ಗೌರವಿಸಲಾಗಿತ್ತು. ಅಲ್ಲದೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಹಾಗೂ ನಾಡೋಜ ಪ್ರಶಸ್ತಿಗೂ ಇವರು ಭಾಜನರಾಗಿದ್ದರು. ಮೈಸೂರು ವಿಶ್ವವಿದ್ಯಾಲಯ ಶಿವಕುಮಾರ್​ ಅವರಿಗೆ ಗೌರವ ಡಾಕ್ಟರೇಟ್​ ನೀಡಿತ್ತು.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link
Powered by Social Snap