ಚೆನ್ನೈ :
ಖ್ಯಾತ ಗಾಯಕ ಎಸ್.ಪಿ ಬಾಲಸುಬ್ರಮಣ್ಯಂ ಅವರ ಅರೋಗ್ಯ ತೀವ್ರ ಹದಗೆಡುತ್ತಿದ್ದು, ಮುಂದಿನ 24 ಗಂಟೆಗಳ ಕಾಲ ಏನನ್ನೂ ಹೇಳಲಾಗುವುದಿಲ್ಲ ಎಂದು ಅಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.
ಕೊರೊನಾ ದೃಢಪಟ್ಟ ಹಿನ್ನೆಲೆಯಲ್ಲಿ ಎಸ್‌ಪಿಬಿ ಚೆನ್ನೈನ ಅರುಂಬಾಕಂನಲ್ಲಿರುವ ಎಂಜಿಎಂ ಹೆಲ್ತ್ ಕೇರ್ ಸೆಂಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ವೆಂಟಿಲೇಟರ್ ಸಹಾಯದಿಂದ ಉಸಿರಾಟ ನಡೆಸುತ್ತಿದ್ದಾರೆ ಎಂಬುದಾಗಿ ಚೆನ್ನೈನ ಎಂಜಿಎಂ ಹೆಲ್ತ್‌ಕೇರ್ ಸಂಸ್ಥೆಯು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿ ಮಾಹಿತಿ ನೀಡಿದೆ.
ಲೈಫ್ ಸಪೋರ್ಟರ್‌ನಿಂದ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಹಾಗಾಗಿ ಎಸ್‌ಪಿಬಿ ಆರೋಗ್ಯದಲ್ಲಿ ಚೇತರಿಕೆ ಕಾಣಲು ಇನ್ನು 2 ದಿನಗಳ ಸಮಯವಾದರೂ ಬೇಕಾಗುವುದು ಎಂದು ಆಸ್ಪತ್ರೆ ಮೂಲಗಳು ಹೇಳ್ತಿವೆ.
ಸದ್ಯ ತಜ್ಞ ವೈದ್ಯರ ತಂಡ ಅವರಿಗೆ ಚಿಕಿತ್ಸೆ ನೀಡುತ್ತಿದ್ದು, ತೀವ್ರ ನಿಗಾ ವಹಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ