ಬೆಂಗಳೂರು:
ಇಂದು ಸಂಜೆ 6 ಗಂಟೆಯ ಒಳಗಡೆ ನಿರ್ಧಾರ ತಿಳಿಸಲು ಸಾಧ್ಯವಿಲ್ಲ ಎಂದು ಹೇಳಿ ಸ್ಪೀಕರ್ ಕೆ.ಆರ್.ರಮೇಶ್ಕುಮಾರ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.
ಇಂದು ಸಂಜೆ 6 ಗಂಟೆಯೊಳಗೆ ರಾಜೀನಾಮೆ ನೀಡಿರುವ ಅತೃಪ್ತ ಶಾಸಕರೆಲ್ಲರೂ ವಿಧಾನಸಭಾಧ್ಯಕ್ಷ ಕೆ.ಆರ್.ರಮೇಶ್ಕುಮಾರ್ ಎದುರು ಹಾಜರಾಗಬೇಕು ಎಂದು ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಸ್ಪೀಕರ್ ಆಗಿರುವ ನನಗೆ ನೀವು ನನಗೆ ಆದೇಶಿಸಲು ಬರುವುದಿಲ್ಲ, ಅಸೆಂಬ್ಲಿ ನಿಯಾಮಾವಳಿಗಳ ಪ್ರಕಾರ ನಾನು ಕ್ರಮ ತೆಗೆದುಕೊಳ್ಳುತ್ತೇನೆ, ಸ್ಪೀಕರ್ ಆಗಿ ಸಾಂವಿಧಾನಿಕ ನಿಯಮಗಳನ್ನು ಪಾಲಿಸಬೇಕಿದೆ, ವಿಚಾರಣೆಯನ್ನು ಮಧ್ಯರಾತ್ರಿ 12 ಗಂಟೆಗೊಳಗೆ ಮುಗಿಸಲು ಸಾಧ್ಯವಿಲ್ಲ.
ರಾಜಿನಾಮೆ ಸ್ವಯಂ ಪ್ರೇರಿತವೋ ಅಥವಾ ಬಲವಂತವೋ ಎಂಬ ಬಗ್ಗೆ ತನಿಖೆ ನಡೆಸಬೇಕು, ಹೀಗಾಗಿ ಅರ್ಜಿಯ ವಿತಾರಣೆ ಸಂಬಂಧ ಏಕಾಏಕಿ ನಿರ್ಧಾರ ಕೈಗೊಳ್ಳಲಾಗುವುದಿಲ್ಲ ಎಂದು ಸ್ಪೀಕರ್ ರಮೇಶ್ ಕುಮಾರ್ ಸುಪ್ರೀಂಕೋರ್ಟ್ ಗೆ ವಿವರಿಸಿದ್ದಾರೆ.
ಇನ್ನು ಸುಪ್ರೀಂಕೋರ್ಟ್ ಸ್ಪೀಕರ್ ರಮೇಶ್ ಕುಮಾರ್ ಅವರು ಸಲ್ಲಿಸಿದ್ದ ಅರ್ಜಿಯ ತುರ್ತು ವಿಚಾರಣೆಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ.
ಅತೃಪ್ತ ಶಾಸಕರ ರಾಜೀನಾಮೆ ಕುರಿತು ಇಂದೇ ನಿರ್ಧಾರ ಕೈಗೊಳ್ಳಬೇಕು. ಸ್ಪೀಕರ್ ಎದುರು ಹಾಜರಾಗಲು ಬೆಂಗಳೂರಿಗೆ ಬರುವ ಅತೃಪ್ತ ಶಾಸಕರಿಗೆ ಅಗತ್ಯ ಭದ್ರತೆ ಒದಗಿಸುವಂತೆ ಕರ್ನಾಟಕ ಪೊಲೀಸ್ ಡಿಜಿಪಿ ಅವರಿಗೂ ನ್ಯಾಯಪೀಠ ಸೂಚನೆ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ