ಬೆಂಗಳೂರು :
ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ರಾಜಕೀಯ ಕಾರ್ಯದರ್ಶಿ ಎಸ್. ಆರ್. ವಿಶ್ವನಾಥ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಬಿಡಿಎ ನೂತನ ಅಧ್ಯಕ್ಷರಾಗಿ ಯಲಹಂಕ ಬಿಜೆಪಿ ಶಾಸಕ ಎಸ್ ಆರ್ ವಿಶ್ವನಾಥ್ ಅವರನ್ನು ನೇಮಕ ಮಾಡಲಾಗಿದೆ. ಗುರುವಾರ ಅವರು ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಆದ್ದರಿಂದ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
“ಈಗ ನನಗೆ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಬೆಂಗಳೂರು ನಾಗರಿಕರಿಗೆ ಸೇವೆ ಸಲ್ಲಿಸಲು ಜವಾಬ್ದಾರಿಯನ್ನು ನೀಡಿರುವ ಹಿನ್ನಲೆಯಲ್ಲಿ ನಾನು ಈ ದಿನ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ಸಲ್ಲಿಸಿರುತ್ತೇನೆ”
“ನಮ್ಮ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡುವ ಮೂಲಕ ತಮ್ಮೊಂದಿಗೆ ಅತ್ಯುತ್ತಮ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟಿಕ್ಕಾಗಿ ಹೃದಯಪೂರ್ವಕ ಧನ್ಯವಾದಗಳು” ಎಂದು ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ