ಜೂನ್ 25 ರಿಂದ SSLC ಪರೀಕ್ಷೆ : ಇಲ್ಲಿದೆ ವೇಳಾಪಟ್ಟಿ!!

ಬೆಂಗಳೂರು:

    ಕರೋನ ವೈರಸ್ ಸಾಂಕ್ರಾಮಿಕ ರೋಗ ಎಲ್ಲೆಡೆ ಹರಡುತ್ತಿದೆ, ಇದರ ಮಧ್ಯೆ ಮುಂದೂಡಿಕೆಯಾಗಿದ್ದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಜೂನ್ 25 ರಿಂದ ನಡೆಯಲಿದ್ದು, ವೇಳಾಪಟ್ಟಿ ಬಿಡುಗಡೆಗೊಂಡಿದೆ.

     ಈಗಾಗಲೇ ಮಕ್ಕಳನ್ನು ಭಯದಿಂದ ಮುಕ್ತರಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಿದ್ದತೆಗಳನ್ನು ನಡೆಸಿದ್ದು,ಪರೀಕ್ಷೆಗೆ ಎಲ್ಲಾ ಕ್ರಮಗಳನ್ನು ಕೈಗೊಂಡಿದೆ. ಜೂನ್ 25 ರಿಂದ ಜುಲೈ 4ರವರೆಗೆ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ವೇಳಪಟ್ಟಿ ಹೀಗಿದೆ.

  1. ಜೂನ್ 25: ಗುರುವಾರ -ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ – ಬೆಳಗ್ಗೆ- 10.30ರಿಂದ ಮಧ್ಯಾಹ್ನ 1.30ರವರೆಗೆ
  2. ಜೂನ್ 26: ಶುಕ್ರವಾರ- ಕೋರ್ ಸಬ್ಜೆಕ್​- ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಆಯಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಟು (ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45), ಇಂಜಿನಿಯರಿಂಗ್ ಗ್ರಾಫಿಕ್ಸ್ ಟು (ಮಧ್ಯಾಹ್ನ 2ರಿಂದ ಸಂಜೆ 5.15ರವರೆಗೆ), ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45), ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ – ಬೆಳಗ್ಗೆ 10.30ರಿಂದ 1.45
  3. ಜೂನ್ 27: ಶನಿವಾರ – ಗಣಿತ, ಸಮಾಜಶಾಸ್ತ್ರ, – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45
  4. ಜೂನ್ 29: ಸೋಮವಾರ- ವಿಜ್ಞಾನ, ರಾಜ್ಯಶಾಸ್ತ್ರ(ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45) ಕರ್ನಾಟಕ ಹಿಂದೂಸ್ತಾನಿ ಸಂಗೀತ- (ಮಧ್ಯಾಹ್ನ 2ರಿಂದ ಸಂಜೆ 5.15)
  5. ಜುಲೈ 1: ಬುಧವಾರ- ಸಮಾಜ ವಿಜ್ಞಾನ – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45
  6. ಜುಲೈ 2: ಗುರುವಾರ- ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45
  7. ಜುಲೈ 3: ಶುಕ್ರವಾರ ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್, ಆರೇಬಿಕ್, ಪರ್ಶಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30
  8. ಜುಲೈ 4: ಜೆಟಿಎಸ್ (JTS) ಅಭ್ಯರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆ

 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap