ಬೆಂಗಳೂರು :
ಆ.10ರಂದು ಎಸ್ಎಸ್ಎಲ್ಸಿ ಫಲಿತಾಂಶ ಮಧ್ಯಾಹ್ನ 3 ಗಂಟೆಗೆ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಶಿಕ್ಷಣ ಸಚಿವ ಸುರೇಶ್ ಕುಮಾರ್ ಶುಕ್ರವಾರ ತಿಳಿಸಿದ್ದಾರೆ.
ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಮತ್ತು ಫಲಿತಾಂಶ ಪ್ರಕಟಣೆಯ ಸಿದ್ಧತೆ ಪೂರ್ಣಗೊಂಡಿದ್ದು, ಆಗಸ್ಟ್ 8ರೊಳಗೆ ಫಲಿತಾಂಶ ಪ್ರಕಟಿಸಲಾಗುವುದು’ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ಕುಮಾರ್ ಇತ್ತೀಚೆಗೆ ಮಾಧ್ಯಮಗಳಿಗೆ ತಿಳಿಸಿದ್ದರು. ಆದರೆ, ಆ.7ರಂದೇ ಫಲಿತಾಂಶ ಪ್ರಕಟವಾಗಲಿದೆ ಎಂದು ಗುರುವಾರ ಸುದ್ದಿ ಹರಿದಾಡಿತ್ತು.
ಇದೀಗ ಎಲ್ಲ ಗೊಂದಲಗಳಿಗೂ ತೆರೆ ಬಿದ್ದಿದ್ದು,ಕರೊನಾ ಆತಂಕದ ನಡುವೆಯೂ 2019-20ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ ಬರೆದಿದ್ದ ಸುಮಾರು 8.5 ಲಕ್ಷ ವಿದ್ಯಾರ್ಥಿಗಳ ಭವಿಷ್ಯ ಇನ್ನು 3 ದಿನದಲ್ಲಿ ಹೊರ ಬೀಳಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ