ಬೆಂಗಳೂರು :
ಮುಂಬರುವ ಎಸ್‌ಎಸ್‌ಲ್‌ಸಿ ಪರೀಕ್ಷೆಯ ಸಮಯದ ಅವಧಿಯನ್ನು 15ರಿಂದ 30 ನಿಮಿಷ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.
ಪ್ರಶ್ನೆಪತ್ರಿಕೆಯ ಸ್ವರೂಪದಲ್ಲಿ ಬದಲಾವಣೆಯಾಗಿರುವ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡು ವಿಷಯಗಳಿಗನುಗುಣವಾಗಿ ಪರೀಕ್ಷಾ ಅವಧಿಯನ್ನು 15 ನಿಮಿಷದಿಂದ ಅರ್ಧ ಗಂಟೆಗಳ ಕಾಲ ಹೆಚ್ಚಿಸಲಾಗಿದೆ.
ಪ್ರಥಮ ಹಾಗೂ ಐಚ್ಚಿಕ ಭಾಷಾ ವಿಷಯಗಳಿಗೆ 15 ನಿಮಿಷ ಹೆಚ್ಚಳ ಮಾಡಲಾಗಿದೆ. ಇನ್ನು ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಕ್ಕೆ 30 ನಿಮಿಷ ಹೆಚ್ಚುವರಿ ಸಮಯವನ್ನು ನೀಡಲಾಗಿದ್ದು, ಇದು ಪ್ರಸಕ್ತ ವರ್ಷಕ್ಕೆ ಅನ್ವಯವಾಗುತ್ತದೆ ಎಂದು ಪ್ರೌಢಶಿಕ್ಷಣ ಮಂಡಳಿಯ ಅಧಿಕಾರಿ ಖಚಿತಪಡಿಸಿದ್ದಾರೆ. ಈವರೆಗೂ ಪ್ರತಿ ವಿಷಯಕ್ಕೆ 3 ಗಂಟೆ ಸಮಯವನ್ನು ನಿಗದಿಪಡಿಸಲಾಗಿತ್ತು. ಆದರೆ ಪ್ರಸಕ್ತ ಶೈಕ್ಷಣಿಕ ವರ್ಷದಿಂದ ಪ್ರಶ್ನೆ ಪತ್ರಿಕೆಯ ಸ್ವರೂಪ ಬದಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ