ಬೆಂಗಳೂರು:
ಎಸ್‌ಎಸ್‌ಎಲ್‌ಸಿ ಪ್ರಿಪರೇಟರಿ ಪರೀಕ್ಷೆಯ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಒಪ್ಪಿಕೊಂಡಿದೆ.
ಮಂಗಳವಾರ ಗಣಿತ ಪ್ರಿಪರೇಟರಿ ಪರೀಕ್ಷೆ ನಡೆಯಬೇಕಿತ್ತು. ಪರೀಕ್ಷೆ ಆರಂಭಗೊಂಡ ಕೆಲವೇ ನಿಮಿಷಗಳಲ್ಲಿ ಪ್ರಶ್ನೆ ಪತ್ರಿಕೆ ವಾಟ್ಸಪ್‌ಗಳಲ್ಲಿ ಹರಿದಾಡಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಪ್ರೌಢಶಿಕ್ಷಣ ಮಂಡಳಿ ಪ್ರಶ್ನೆಪತ್ರಿಕೆಗಳ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾಗುವ ಶಿಕ್ಷಕರನ್ನು ಮುಂದೆ ನಡೆಯಲಿರುವ ಮುಖ್ಯ ಪರೀಕ್ಷೆ ನಡೆಯುವ ಒಂದು ವಾರದ ಮೊದಲು ಪೊಲೀಸ್ ವಶಕ್ಕೆ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಈ ಬಗ್ಗೆ ಪರೀಕ್ಷಾ ಮಂಡಳಿಯವರನ್ನು ಪ್ರಶ್ನಿಸಿದಾಗ, ಇದರ ಹಿಂದೆ ಯಾರಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ನಾವು ಈಗಾಗಲೇ ಪೊಲೀಸರಿಗೆ ದೂರು ನೀಡಿದ್ದೇವೆ, ಮುಂದಿನ ದಿನಗಳಲ್ಲಿ ಇಂತಹ ಪ್ರಮಾದಗಳಾದರೇ ಶಾಲೆಯ ಮುಖ್ಯೋಪಾಧ್ಯಾಯರೇ ನೇರ ಹೊಣೆಯಾಗುತ್ತಾರೆ ಎಂದು ಪರೀಕ್ಷಾ ಮಂಡಳಿಯ ನಿರ್ದೇಶಕಿ ವಿ. ಸುಮಂಗಲಾ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








