ಬೆಂಗಳೂರು:
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ 2019ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಘೋಷಣೆ ಮಾಡಿದೆ.
ವಿದ್ಯಾರ್ಥಿಗಳು ಇಲಾಖೆ ನೀಡಿರುವ ಅಧಿಕೃತ ವೆಬ್ಸೈಟ್ karresults.nic.in ಮತ್ತು kseeb.kar.nic.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಇಂದು ಫಲಿತಾಂಶ ಪಡೆಯಬಹುದಾಗಿದೆ. ಶಾಲೆಗಳಲ್ಲಿ ಮೇ 1ರಂದು ಫಲಿತಾಂಶ ಲಭ್ಯವಾಗಲಿದೆ.
ಮಂಗಳವಾರ ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ ಆಯುಕ್ತ, ಮಂಡಳಿಯ ನಿರ್ದೇಶಕಿ ವಿ.ಸುಮಂಗಲಾ ಅವರು ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶವನ್ನು ಪ್ರಕಟಿಸಿದರು.
‘ಮೌಲ್ಯ ಮಾಪನ ಆದ ನಂತರ ಕೇಂದ್ರದಿಂದಲೇ ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ್ದೇವೆ. ಆದ್ದರಿಂದ, ಇಷ್ಟು ಬೇಗ ಫಲಿತಾಂಶವನ್ನು ನೀಡಲು ಸಾಧ್ಯವಾಯಿತು’ ಎಂದು ಪ್ರೌಡ ಶಿಕ್ಷಣ ಪರೀಕ್ಷಾ ಮಂಡಳಿ ಕಾರ್ಯದರ್ಶಿ ಉಮಾ ಶಂಕರ್ ಹೇಳಿದರು.
2019ನೇ ಸಾಲಿನಲ್ಲಿ 2,847 ಪರೀಕ್ಷಾ ಕೇಂದ್ರಗಳಲ್ಲಿ 8,41,666 ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದರು. ಮಾರ್ಚ್ 22 ರಿಂದ ಏಪ್ರಿಲ್ 4ರ ತನಕ ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆದಿತ್ತು. ಮಧ್ಯಾಹ್ನ 1 ಗಂಟೆಯ ಬಳಿಕ ಆನ್‌ಲೈನ್‌ನಲ್ಲಿ ಪರೀಕ್ಷೆ ಫಲಿತಾಂಶ ಸಿಗಲಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
