ಜುಲೈ ಅಥವಾ ಆಗಸ್ಟ್ ಮೊದಲ ವಾರ SSLC ರಿಸಲ್ಟ್!!

 ಬಳ್ಳಾರಿ:

      ಈ ತಿಂಗಳ 25 ರಿಂದ ಜುಲೈ 4 ವರೆಗೆ ನಡೆಯುವ SSLC ಪರೀಕ್ಷೆಯ ಫಲಿತಾಂಶವನ್ನು ಬರುವ ಜುಲೈ ಅಂತ್ಯ ಇಲ್ಲವೆ ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದರು.

      ಅವರಿಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಹೈಕೋರ್ಟ್ ನಿರ್ದೇಶನದಂತೆ ಮಕ್ಕಳ ಸುರಕ್ಷತೆಗೆ ಆದ್ಯತೆ ಮತ್ತು ಆತ್ಮ ವಿಶ್ವಾಸದಿಂದ ಪರೀಕ್ಷೆ ಬರೆಯಲು ವ್ಯವಸ್ಥೆ ಕಲ್ಪಿಸಲಾಗಿದೆ. ಪರೀಕ್ಷಾ ಕೊಠಡಿಯಲ್ಲಿ ಸಾಮಾಜಿಕ ಅಂತರ ಸ್ಯಾನಿಟೈಸರ್ ಬಳಕೆ ಮತ್ತು ಮಾಸ್ಕ್ ಅನ್ನು ಸಿಬ್ಬಂದಿ ಹಾಗು ವಿದ್ಯಾರ್ಥಿಗಳಿಗೆ ಕಡ್ಡಾಯಗೊಳಿಸಲಾಗಿದೆ. ಮಾಸ್ಕ್ ಅನ್ನು ರಾಜ್ಯದ ಸ್ಕೌಟ್ಸ್ ಅಂಡ್ ಗೈಡ್ಸ್ ಸಂಸ್ಥೆ ಮತ್ತು ಇತರೆ ಸಂಘ ಸಂಸ್ಥೆಗಳು ಉಚಿತವಾಗಿ ನೀಡಲಿವೆ.

      ಪರೀಕ್ಷೆ ಬರೆಯುವ 8,48,203 ವಿದ್ಯಾರ್ಥಿಗಳಿಗೆ ಪರೀಕ್ಷಾ ಕೊಠಡಿಗೆ ಹೋಗುವ ಮುನ್ನ ಆರೋಗ್ಯ ತಪಾಸಣೆ ನಡೆಸಲಿದೆ. ಅನಾರೋಗ್ಯ ಕಂಡ ಮಕ್ಕಳಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಲಿದೆ. ಸಾಮಾಜಿಕ ಅಂತರ ಕಾಯ್ದುಕೊಳ್ಳಲು ನೆರವಾಗುವಂತೆ ಪೋಷಕರು ಶಾಲಾ ಆವರಣಕ್ಕೆ ಬರದಿರುವುದು ಒಳಿತು. ಕುಡಿಯುವ ನೀರನ್ನು ಮಕ್ಕಳು ಮನೆಯಿಂದ ತರಬೇಕು. ತರದಿದ್ದರೆ, ಶಾಲೆಯಲ್ಲೇ ಒದಗಿಸಲಾಗುವುದು. ಪರೀಕ್ಷೆಗೆ ಬರುವ ಎಲ್ಲಾ ಮಕ್ಕಳಿಗೆ ಬಸ್‍ನಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸಲಾಗುತ್ತಿದೆ. ಪರೀಕ್ಷೆಗೆ ಸಿದ್ಧರಾಗಲು ಮಕ್ಕಳಿಗೆ ಈ ತಂಗಳ 10 ರಿಂದ 20 ರವರೆಗೆ ಪುನಃ ದೂರದರ್ಶನದಲ್ಲಿ ಪುನರ್ ಮನನ ತರಗತಿಗಳು ಆರಂಭಗೊಳ್ಳಲಿವೆ ಎಂದು ತಿಳಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link