ಕೊಡಗು:
SSLC ಪರೀಕ್ಷೆ ಭಯದಿಂದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲೂಕಿನ ಕಾಜೂರು ಗ್ರಾಮದಲ್ಲಿ ನಡೆದಿದೆ.
ಕಾಜೂರು ಶಾಲೆಯೊಂದರಲ್ಲಿ ವ್ಯಾಸಂಗ ಮಾಡುತ್ತಿದ್ದ 10ನೇ ತರಗತಿ ವಿದ್ಯಾರ್ಥಿ ರಿಷಿ (15) ಮೃತ ದುರ್ದೈವಿ.
ಪ್ರೌಢ ಶಿಕ್ಷಣ ಇಲಾಖೆ ಇಂದು ಎಸ್ಎಸ್ಎಲ್ಸಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಪರೀಕ್ಷಾ ವೇಳಾಪಟ್ಟಿ ಪ್ರಕಟವಾದ ಕಾರಣ ಭಯದಿಂದ ಮನೆಯಲ್ಲಿ ಪೋಷಕರು ಇಲ್ಲದ ಸಂದರ್ಭದಲ್ಲಿ ನೇಣಿಗೆ ಶರಣಾಗಿದ್ದಾನೆ.
ಶನಿವಾರ ಸಂತೆ ಸರ್ಕಾರಿ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದ್ದು, ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳೆದ ಎರಡು ತಿಂಗಳಿನಿಂದ ಎಸ್ ಎಸ್ ಎಲ್ಸಿ ಪರೀಕ್ಷೆ ನಡೆಯುವ ಬಗ್ಗೆಯೇ ಅನಿಶ್ಚಿತತೆ ಇತ್ತು. ಆದರೆ ಪರೀಕ್ಷೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಕೆಲ ವಿದ್ಯಾರ್ಥಿಗಳು ಆತಂಕಕ್ಕೀಡಾಗಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ