ಬೆಂಗಳೂರು:
ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆ ಪೂರ್ಣಗೊಂಡಿದ್ದು, ಮೌಲ್ಯಮಾಪನ ಕಾರ್ಯ ಏಪ್ರಿಲ್ 10 ರ ಬುಧವಾರದಿಂದ ಆರಂಭವಾಗಲಿದೆ.
ಈ ಬಾರಿ ಎಲ್ಲಾ ಮೌಲ್ಯ ಮಾಪನ ಕೇಂದ್ರಗಳಿಂದ ನೇರವಾಗಿ ಆನ್‌ಲೈನ್ ಮೂಲಕ ಅಂಕಗಳನ್ನು ನಮೂದು ಮಾಡುವ ವ್ಯವಸ್ಥೆ ಜಾರಿಗೆ ತರಲಾಗಿದ್ದು, ಮೌಲ್ಯಮಾಪನ ಕಾರ್ಯ ಶೀಘ್ರ ಪೂರ್ಣಗೊಳ್ಳುವ ಸಾಧ್ಯತೆಯಿದೆ.
ರಾಜ್ಯದ 228 ಮೌಲ್ಯಮಾಪನ ಕೇಂದ್ರಗಳಲ್ಲಿ ಇಂದಿನಿಂದ ಸುಮಾರು 72 ಸಾವಿರ ಮೌಲ್ಯಮಾಪಕರು ಮೌಲ್ಯಮಾಪನ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ.
ಇದರ ಮಧ್ಯೆ ಮೌಲ್ಯಮಾಪನಕ್ಕೆ ನಿಯೋಜನೆಗೊಂಡಿರುವ ಕೆಲ ಶಿಕ್ಷಕರನ್ನು ಲೋಕಸಭಾ ಚುನಾವಣೆಯ ತರಬೇತಿಗೆ ನಿಯೋಜಿಸಲಾಗಿದೆ ಎಂದು ತಿಳಿದು ಬಂದಿದೆ. ಹೀಗಾಗಿ ಈ ಹಿಂದೆ ಘೋಷಿಸಿದಂತೆ ಮಾಸಾಂತ್ಯದೊಳಗೆ ಫಲಿತಾಂಶ ಪ್ರಕಟವಾಗುವುದು ಕಷ್ಟ ಎಂದು ಹೇಳಲಾಗಿದ್ದು, ಕೊಂಚ ವಿಳಂಬವಾಗುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಚುನಾವಣೆ ಹಿನ್ನೆಲೆಯಲ್ಲಿ ಹೆಚ್ಚುವರಿ ಶಿಕ್ಷಕರನ್ನು ನಿಯೋಜಿಸಿರುವುದರಿಂದ ನಿಗದಿತ ಅವಧಿಯಲ್ಲೇ ಮೌಲ್ಯಮಾಪನ ಕಾರ್ಯ ಪೂರ್ಣಗೊಳ್ಳಲಿದೆ ಎಂದು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ