ಶಾ ಬೇಟಿಗೆ ತೆರಳಿದ ಬಿಜೆಪಿ ನಿಯೋಗ : ಸರ್ಕಾರ ರಚನೆ ಬಗ್ಗೆ ಚರ್ಚೆ!!

ನವದೆಹಲಿ: 

      ಮೈತ್ರಿ ಸರಕಾರ ಪತನವಾದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್ ನೇತೃತ್ವದ ರಾಜ್ಯ ಬಿಜೆಪಿ ನಿಯೋಗ ಕೇಂದ್ರ ಗೃಹ ಸಚಿವ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಅವರನ್ನು ಭೇಟಿಯಾಗಿದೆ. 

      ಈ ಹಿಂದೆ ಸರ್ಕಾರ ರಚನೆ ಸಂದರ್ಭದಲ್ಲಿ ಆತುರವಾಗಿ ಕೈಗೊಂಡ ಕ್ರಮಗಳಿಂದ ಬುದ್ದಿ ಕಲಿತಿರುವ ಬಿಜೆಪಿ, ಈ ಬಾರಿ ಸರ್ಕಾರ ರಚನೆಯಲ್ಲಿ ಯಾವುದೇ ರೀತಿಯ ತೊಡಕುಗಳಾಗದಂತೆ ಎಚ್ಚರಿಕೆಯ ಹೆಜ್ಜೆ ಇಡುತ್ತಿದೆ.

      ಸ್ಪೀಕರ್​ಗೆ ರಾಜೀನಾಮೆ ನೀಡಿರುವ 15 ಬಂಡಾಯ ಶಾಸಕರ ವಿಚಾರ ಇತ್ಯರ್ಥವಾಗುವವರೆಗೂ ಹೊಸ ಸರ್ಕಾರ ರಚನೆ ಮಾಡಲು ಬಿಜೆಪಿಗೆ ರಾಜ್ಯಪಾಲರು ಆಹ್ವಾನ ನೀಡುವುದು ಅನುಮಾನ ಎನ್ನಲಾಗಿದೆ. ಹಾಗಾಗಿ, ಅತೃಪ್ತ ಶಾಸಕರ ರಾಜೀನಾಮೆ ವಿಚಾರ ಪೂರ್ಣಗೊಂಡ ನಂತರದಲ್ಲಿ ಹೊಸ ಸರ್ಕಾರ ರಚನೆಗೆ ಅವಕಾಶ ಸಿಗಬಹುದು ಎನ್ನಲಾಗುತ್ತಿದೆ.  ಅಧಿಕಾರದ ಹಪಾಹಪಿಗೆ ಕಟ್ಟುಬಿದ್ದು ಮುಜುಗರಕ್ಕೊಳಗಾಗುವ ಸನ್ನಿವೇಶ ತಂದುಕೊಳ್ಳದೆ ಪರಿಸ್ಥಿತಿ ನಮ್ಮ ಪರವಾಗಿದೆ ಎಂಬ ದೃಢತೆ ಸಿಕ್ಕ ಬಳಿಕವಷ್ಟೇ ಸರ್ಕಾರ ರಚನೆಗೆ ಕೈ ಹಾಕೋಣ ಎಂದು ಕೇಂದ್ರ ನಾಯಕರು ನಿರ್ದೇಶನ ನೀಡಿದ್ದಾರೆ ಎನ್ನಲಾಗುತ್ತಿದೆ.

      ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಮಾಹಿತಿ ನೀಡಿ, ಸರ್ಕಾರ ರಚನೆ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಸಿ, ಸರ್ಕಾರ ರಚನೆ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಮಾತುಕತೆ ನಡೆಸುವ ಸಲುವಾಗಿ ಶೆಟ್ಟರ್‌ ನಿಯೋಗದಲ್ಲಿ ಶಾಸಕರಾದ ಬಸವರಾಜ್ ಬೊಮ್ಮಾಯಿ, ಅರವಿಂದ್ ಲಿಂಬಾವಳಿ, ಮಾಧುಸ್ವಾಮಿ, ಯಡಿಯೂರಪ್ಪ ಪುತ್ರ ವಿಜಯೇಂದ್ರ,  ಕೆ.ಜಿ. ಬೋಪಯ್ಯ ನಾಯಕರನ್ನು ಒಳಗೊಂಡ ಕರ್ನಾಟಕ ಬಿಜೆಪಿ ನಿಯೋಗ ಗುರುವಾರ ದೆಹಲಿಗೆ ತಲುಪಿದೆ. 

       ಇನ್ನು ರಾಜ್ಯದಲ್ಲಿ ಸರ್ಕಾರ ರಚನೆ ಕುರಿತು ಅಮಿತ್ ಶಾ ಯಾವ ನಡೆ ಅನುಸರಿಸಲಿದ್ದಾರೆ ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap