ಬೆಂಗಳೂರು:
ಬೆಳಗಾವಿ ರಾಜಕೀಯದಿಂದ ಹೊಸ ಸುದ್ದಿಯೊಂದು ಹೊರಬಿದ್ದಿದೆ. ಜಾರಕಿಹೊಳಿ ಕುಟುಂಬದ ಪ್ರಭಾವಿ ನಾಯಕ ಸತೀಶ್ ಜಾರಕಿಹೊಳಿ ಅವರು ಸ್ಪರ್ಧಿಸುವುದು ಖಚಿತ ಎನ್ನಲಾಗುತ್ತಿದೆ.
ಕೆಲ ದಿವಸಗಳ ಹಿಂದಷ್ಟೆ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಸತೀಶ ಜಾರಕಿಹೊಳಿ ಸ್ಪರ್ಧಿಸುವುದು ಖಚಿತ ಎಂದು ಅವರ ಸಹೋದರ, ಸಚಿವ ರಮೇಶ ಜಾರಕಿಹೊಳಿ ಹೇಳಿದ್ದರು, ಅವರ ಮಾತಿಗೆ ಇಂಬು ನೀಡುವಂತ ಕೆಲ ಘಟನೆಗಳು ನಡೆಯುತ್ತಿದ್ದು, ಮುಂಬರುವ ಲೋಕಸಭಾ ಚುನಾವಣೆಗೆ ಬೆಳಗಾವಿಯಿಂದ ಬಿಜೆಪಿ ಸಂಸದ ಸುರೇಶ್ ಅಂಗಡಿಯನ್ನು ಕಟ್ಟಿ ಹಾಕುವ ನಿಟ್ಟಿನಲ್ಲಿ ಸತೀಶ್ ಜಾರಕಿಹೊಳಿಯವರೇ ಸಮರ್ಥರು ಎನ್ನುವ ನಿರ್ಧಾರಕ್ಕೆ ಬಂದಿದ್ದಾರೆ ಎನಲಾಗಿದ್ದು, ಈಗಾಗಲೇ ಈ ಬಗ್ಗೆ ಕಾಂಗ್ರೆಸ್ ನ ರಾಜ್ಯ ಹಾಗೂ ರಾಷ್ಟ್ರ ನಾಯಕರುಗಳು ಸತೀಶ್ ಅವರನ್ನು ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.
ಒಂದು ವೇಳೆ ಸತೀಶ್ ಜಾರಕಿಹೊಳಿಯವರು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಕ್ಕೆ ಒಪ್ಪಿಕೊಳ್ಳದೇ ಹೋದಲ್ಲಿ ಪೌರಾಡಳಿತ ಸಚಿವ ರಮೇಶ್ ಜಾರಕಿಹೊಳಿ ಕಣಕ್ಕಿಳಿಸಲು ಕೂಡ ಹೈಕಮಾಂಡ್ ನಿರ್ಧಾರಿಸಿದ್ದು, ಇಬ್ಬರಲ್ಲಿ ಒಬ್ಬರು ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ