ರಾಜ್ಯದ ಎಲ್ಲಾ ರಸ್ತೆಗಳಲ್ಲೂ ಟೋಲ್ ಸಂಗ್ರಹಕ್ಕೆ ಸರ್ಕಾರ ನಿರ್ಧಾರ!!!

ಬೆಂಗಳೂರು :

       ರಾಜ್ಯದಾದ್ಯಂತ 1,117 ಕಿ.ಮೀ. ರಸ್ತೆ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಚಿಂತನೆ ನಡೆಸಿದ್ದು, ಅದಕ್ಕಾಗಿ ಎಲ್ಲ ರಸ್ತೆಗಳಲ್ಲೂ ಟೋಲ್ ಸಂಗ್ರಹಕ್ಕೆ ನಿರ್ಧರಿಸಿದೆ.

      ಈ ಬಗ್ಗೆ ಮಾಹಿತಿ ನೀಡಿದ ಲೋಕೋಪಯೋಗಿ ಸಚಿವ ಎಚ್.ಡಿ. ರೇವಣ್ಣ, ಹಿಂದಿನ ಸರ್ಕಾರದ ಅವಧಿಯಲ್ಲಿ ತೆಗೆದುಕೊಂಡ ತೀರ್ಮಾನವನ್ನೇ ನಾವು ಮುಂದುವರಿಸುತ್ತಿದ್ದೇವೆ ಎಂದು ಹೇಳಿದ್ದಾರೆ. 37 ಸಾವಿರ ಕೋಟಿ ರೂಪಾಯಿ ವೆಚ್ಚದಲ್ಲಿ 3,600 ಕಿ.ಮೀ. ರಸ್ತೆ ನಿರ್ಮಾಣಕ್ಕೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.

      ರಾಜ್ಯ ಹೆದ್ದಾರಿ ಪ್ರಾಧಿಕಾರ, ಕೆಶಿಪ್ ಮತ್ತು ರಸ್ತೆ ಅಭಿವೃದ್ಧಿ ನಿಗಮದಿಂದ ಒಟ್ಟು 25,800 ಕೋಟಿ ರೂಪಾಯಿ ವೆಚ್ಚದಲ್ಲಿ ಈ ರಸ್ತೆಗಳು ನಿರ್ಮಾಣವಾಗುತ್ತಿದೆ, ಹಾಗೇ 2011 ರಲ್ಲಿ ಪ್ರಕಟವಾದ ಆದೇಶದಂತೆ ರಾಜ್ಯ ಹೆದ್ದಾರಿಗಳಲ್ಲಿ ಬಳಕೆದಾರರ ಶುಲ್ಕ ವಿಧಿಸುವುದನ್ನು ಮುಂದುವರಿಸಲು ತೀರ್ಮಾನಿಸಲಾಗಿದೆ ಎಂಬುದಾಗಿ ತಿಳಿದುಬಂದಿದೆ. ಈ ಮೂಲಕ ವಾಹನ ಸವಾರರಿಗೆ ರಾಜ್ಯ ಸರ್ಕಾರ ಶಾಕ್ ನೀಡಿದೆ. 

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

 

Recent Articles

spot_img

Related Stories

Share via
Copy link