ಬೆಂಗಳೂರು : ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಗೆ ಕೊರೋನಾ ಸೋಂಕು ಇರಲಿಲ್ಲ!!

ಬೆಂಗಳೂರು :

    ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮಹಡಿಯಿಂದ ಬಿದ್ದು ಸಾವನ್ನಪ್ಪಿದ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿರಲಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದೆ.

     ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ವಿವಿಧ ರೋಗಗದಿಂದ ಬಳಲುತ್ತಿದ್ದಂತ ವ್ಯಕ್ತಿಯೊಬ್ಬರು, 3ನೇ ಮಹಡಿಯ ಮೇಲಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡು ಸಾವಿನ್ನಪ್ಪಿದ್ದರು. ಈ ವ್ಯಕ್ತಿಗೆ ಕೊರೋನಾ ಸೋಂಕು ತಗುಲಿತ್ತು. ಹೀಗಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿತ್ತು.

       ಈ ಬಗ್ಗೆ ಸ್ಪಷ್ಟ ಪಡಿಸಿರುವ ರಾಜ್ಯ ಆರೋಗ್ಯ ಇಲಾಖೆ,  ಬೆಂಗಳೂರಿನಲ್ಲಿ 466ನೇ ಕೊರೋನಾ ಶಂಕಿತ ಎಂದು ನಿಮೋನಿಯಾದಿಂದ ಬಳಲುತ್ತಿದ್ದಂತ 50 ವರ್ಷದ ವ್ಯಕ್ತಿ ಚಿಕಿತ್ಸೆಗಾಗಿ ಏಪ್ರಿಲ್ 24ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಇಂತಹ ವ್ಯಕ್ತಿ ರಕ್ತದೊತ್ತಡ, ಹೆಪಟೈಟಿಸ್-ಬಿ ಹಾಗೂ ಕಿಡ್ನಿ ವಿಫಲತೆಯಿಂದ ಬಳಲುತ್ತಿದ್ದರು. ಇವರಿಗೆ ಕೋವಿಡ್-19 ಸೋಂಕು ತಗುಲಿರಲಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದೆ. ಹೀಗಾಗಿ ವಿಕ್ಟೋರಿಯಾ ಆಸ್ಪತ್ರೆಯ 3ನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಶರಣಾದಂತ ವ್ಯಕ್ತಿಗೆ ಕೊರೋನಾ ಸೋಂಕು ಇರಲಿಲ್ಲ ಎಂಬುದಾಗಿ ಸ್ಪಷ್ಟವಾಗಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap