ಬೆಂಗಳೂರು:
ಮಾಜಿ ಹಣಕಾಸು ಸಚಿವ ಅರುಣ್ ಜೇಟ್ಲಿ ನಿಧನದ ಹಿನ್ನೆಲೆ ಪ್ರಮಾಣ ವಚನ ಸ್ವೀಕರಿಸಿದ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆಯನ್ನು ಇನ್ನೆರಡು ದಿನಕ್ಕೆ ಮುಂದೂಡಲಾಗಿದೆ ಎಂದು ತಿಳಿದುಬಂದಿದೆ.
ಬಿಜೆಪಿ ಹಿರಿಯ ನಾಯಕ ಅರುಣ್ ಜೇಟ್ಲಿ ಅವರಿಗೆ ಅಂತಿಮ ನಮನ ಸಲ್ಲಿಸುವ ಸಲುವಾಗಿ ರಾಜ್ಯದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನಾಳೆ ಬೆಳಗ್ಗೆ ದೆಹಲಿಗೆ ತೆರಳಲಿದ್ದಾರೆ. ಅಂತ್ಯಕ್ರಿಯೆ ಮುಗಿದ ನಂತರ ನಾಳೆ ಸಂಜೆಯೇ ರಾಜ್ಯಕ್ಕೆ ಮರಳಲಿದ್ದಾರೆ. ಹೀಗಾಗಿ ಸಚಿವರಿಗೆ ಖಾತೆ ಹಂಚಿಕೆ ಪ್ರಕ್ರಿಯೆ ಸೋಮವಾರಕ್ಕೆ ಮುಂದೂಡಲಾಗಿದೆ.
ಕಳೆದ ಮಂಗಳವಾರ ಬಿ.ಎಸ್. ಯಡಿಯೂರಪ್ಪ ಅವರ ನಾಯಕತ್ವದಲ್ಲಿ ಬಿಜೆಪಿ ಸರ್ಕಾರದ ಭಾಗವಾಗಿ 17 ಜನ ಶಾಸಕರು ನೂತನ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಆದರೆ, ಈವರೆಗೆ ಅವರಿಗ ಖಾತೆಯನ್ನು ನಿಗದಿಪಡಿಸಿರಲಿಲ್ಲ.
ಈ ನಡುವೆ ಅನೇಕ ಹಿರಿಯ ನಾಯಕರು ಗೃಹ ಖಾತೆ ಸೇರಿದಂತೆ ಪ್ರಮುಖ ಖಾತೆಗಳ ಮೇಲೆ ಕಣ್ಣಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಖಾತೆ ಹಂಚಿಕೆ ಬಹುತೇಕ ಅಂತಿಮವಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿತ್ತು. ಆದರೆ, ಅರುಣ್ ಜೇಟ್ಲಿ ಅಗಲಿಕೆಯಿಂದ ಈ ಪ್ರಕ್ರಿಯೆ ತಾತ್ಕಾಲಿಕವಾಗಿ ಎರಡು ದಿನಗಳ ಮಟ್ಟಿಗೆ ಮುಂದೂಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
