ಬೆಂಗಳೂರು:
ಕನ್ನಡ ಚಿತ್ರರಂಗದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ನಿವಾಸದ ಮೇಲೆ ದುಷ್ಕರ್ಮಿಗಳು ಇಂದು ಬೆಳಗಿನ ಜಾವ ಕಲ್ಲು ತೂರಾಟ ನಡೆಸಿರುವ ಘಟನೆ ನಡೆದಿದೆ.
ಬೆಂಗಳೂರಿನ ರಾಜರಾಜೇಶ್ವರಿ ನಗರದ ಐಡಿಯಲ್ ಹೋಮ್ಸ್ ಲೇಔಟ್ ನಲ್ಲಿರುವ ಮನೆ ಹಾಗೂ ಕಚೇರಿ ಮೇಲೆ ಇಂದು ಬೆಳಗ್ಗಿನ ಜಾವ 3 ಗಂಟೆಗೆ ದುಷ್ಕರ್ಮಿಗಳು ಕಲ್ಲು ತೂರಿ ಎಸ್ಕೇಪ್ ಆಗಿದ್ದಾರೆ.
ಕಲ್ಲು ತೂರಾಟದಿಂದ ದರ್ಶನ್ ಅವರ ಕಾರಿನ ಗಾಜು ಜಖಂಗೊಂಡಿದೆ. ಘಟನೆ ನಡೆದ ಸಂದರ್ಭದಲ್ಲಿ ದರ್ಶನ್ ಚಿತ್ರೀಕರಣಕ್ಕಾಗಿ ಹೈದರಾಬಾದಿಗೆ ತೆರಳಿದ್ದರೆಂದು ಹೇಳಲಾಗಿದ್ದು, ಸದ್ಯ ರಾಜರಾಜೇಶ್ವರಿನಗರ ಪೊಲೀಸರು ಹಾಗೂ ಕೆಂಗೇರಿ ಎಸಿಪಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇಚ್ಚೀಚೆಗಷ್ಟೇ ಸುಮಲತಾ ಅಂಬರೀಷ್ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಬೆಂಬಲಿಸಿದ್ದಕ್ಕಾಗಿ ದರ್ಶನ್ ಮತ್ತು ಯಶ್‌ರನ್ನು ಗುರಿಯಾಗಿಸಿಕೊಂಡು ಹಲವರು ಟೀಕೆ ಮಾಡಿದ್ದರು. ಇದೇ ಹಿನ್ನಲೆಯಲ್ಲಿ ದರ್ಶನ್ ಮನೆ ಮೇಲೆ ಕಲ್ಲು ತೂರಾಟ ನಡೆದಿರಬಹುದು ಎಂದು ಅನುಮಾನ ವ್ಯಕ್ತಪಡಿಸಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
